sports news :
ಆರಂಭಿಕ ಆಟಗಾರ ಶುಭ್ ಮನ್ ಗಿಲ್ ಅವರ ಭರ್ಜರಿ ದ್ವಿಶತಕದ ನೆರವಿನಿಂದ ಭಾರತ ನ್ಯೂಜಿಲೆಂಡ್ ವಿರುದ್ಧ 12 ರನ್ ಗಳಿಂದ ಜಯಗಳಿಸಿದೆ. ಈ ಜಯದೊಂದಿಗೆ ಭಾರತ 1-0 ಯಿಂದ ಮುನ್ನಡೆ ಸಾಧಿಸಿದೆ.
ಕಡೆಗಳಿಗೆಯವರೆಗೂ ಕಿವೀಸ್ ಬ್ರೇಸ್ ವೆಲ್ ಹೋರಾಟ ನಡೆಸಿ ಸಿಡಿಲಬ್ಬರದ ಶತಕ ಬಾರಿಸಿದ್ದು ವ್ಯರ್ಥವಾಯಿತು. ಹೀಗಾಗಿ ಭಾರತ 12 ರನ್ ಗಳ ರೋಚಕ ಜಯ ಸಾಧಿಸಿತು. ಭಾರತದ ಪರ ಗಿಲ್ ತಮ್ಮ ಜೀವಮಾನದ ಶ್ರೇಷ್ಠ ಸಾಧನೆ ಮಾಡಿದ ಕೀರ್ತಿಗೆ ಭಾಜನರಾಗಿದ್ದಾರೆ. ಶುಭ್ ಮನ್ ಗಿಲ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಮೊದಲು ಬ್ಯಾಟ್ ಮಾಡಿದ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 349 ರನ್ ಗಳ ಬೃಹತ್ ಮೊತ್ತ ದಾಖಲಿಸಿತು. ಗಿಲ್ 149 ಎಸೆತಗಳಲ್ಲಿ 19 ಬೌಂಡರಿ ಹಾಗೂ 9 ಭರ್ಜರಿ ಸಿಕ್ಸರ್ ನೆರವಿನಿಂದ 208 ರನ್ ಚಚ್ಚಿದರು. 48 ನೇ ಓವರ್ ನಲ್ಲಿ ಗಿಲ್ ಹ್ಯಾಟ್ರಿಕ್ ಸಿಕ್ಸರ್ ಬಾರಿಸಿದರು. ಇದರ ಜತೆಗೆ ಏಕದಿನ ಕ್ರಿಕೆಟ್ ನಲ್ಲಿ 19 ಇನ್ನಿಂಗ್ಸ್‌ನಲ್ಲಿ ವೇಗವಾಗಿ 1000 ರನ್ ಬಾರಿಸಿದರು.