Saturday, December 21, 2024

Latest Posts

ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್.. ಇಬ್ಬರು ಉಗ್ರರ ಹತ್ಯೆ

- Advertisement -

www.karnatakatv.net : ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.

ಬಂಡಿಪೋರಾದ ಸುಮ್ಬ್ಲಾರ್ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಆಧಾರದ ಮೇಲೆ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಈ ವೇಳೆ ಉಗ್ರರು ಏಕಾಏಕಿ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಕೂಡಲೇ ಸ್ಥಳವನ್ನು ಸುತ್ತುವರೆದ ಭದ್ರತಾ ಪಡೆಗಳು ಉಗ್ರರ ದಾಳಿಗೆ ದಿಟ್ಟ ಉತ್ತರವನ್ನು ನೀಡಿದ್ದಾರೆ. ಉಗ್ರರು ಅಡಗಿರುವುದನ್ನು ಖಚಿತಪಡಿಸಿಕೊಂಡ ಭದ್ರತಾ ಪಡೆಗಳು ಮೊದಲಿಗೆ ಶರಣಾಗುವ ಅವಕಾಶವನ್ನು ನೀಡಿದ್ದಾರೆ. ಆದರೆ, ಉಗ್ರರು ಈ ಅವಕಾಶವನ್ನು ನಿರಾಕರಿಸಿದ್ದಾರೆ. ಬಳಿಕ ಎನ್ಕೌಂಟರ್ ನಡೆಸಿ ಅಡಗಿದ್ದ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ.

ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಕಾಳಗದಲ್ಲಿ ಮೂವರು ಯೋಧರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ವರದಿಗಳು ತಿಳಿಸಿವೆ.

- Advertisement -

Latest Posts

Don't Miss