ಪ್ರವಾಹಕ್ಕೆ ಸಿಲುಕಿ ಸಂಕಷ್ಟದಲ್ಲಿರುವ ಅಸ್ಸಾಂ ಜನತೆಗೆ ಓಟಗಾರ್ತಿ ಹಿಮದಾಸ್ ನೆರವಿನ ಹಸ್ತ ಚಾಚಿದ್ದಾರೆ. ಕಳೆದ ಹಲವು ದಿನಗಳಿಂದ ಅಸ್ಸಾಂನಲ್ಲಿ ಭಾರಿ ಮಳೆಯಾಗಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು ಪ್ರವಾಹ ಉಂಟಾಗಿದೆ. ಹೀಗಾಗಿ ಸಾವಿರಾರು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜನರು ಸೇರಿದಂತೆ ಅನೇಕ ಪ್ರಾಣಿ, ಪಕ್ಷಿಗಳು ಬಲಿಯಾಗಿವೆ. ಸದ್ಯ ಪ್ರವಾಹ ಪೀಡಿತರಿಗೆ ನೆರವಾಗುವ ದೃಷ್ಟಿಯಿಂದ ಹಿಮದಾಸ್ ತನ್ನ ವೇತನದ ಅರ್ಧ ಭಾಗವನ್ನ ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಲು ನಿರ್ಧರಿಸಿದ್ದಾರೆ. ಅಷ್ಟೇ ಅಲ್ಲದೆ ತನ್ನ ತವರಿನ ಜನರ ಸಂಕಷ್ಟಕ್ಕೆ ಉದಾರ ನೆರವು ನೀಡುವಂತೆ ಮನವಿ ಮಾಡಿದ್ದಾರೆ. ನೆರವು ನೀಡುವಂತೆ ಜೊತೆಗೆ ಪ್ರವಾಹ ಪೀಡಿತರಿಗೆ ನೆರವಾಗುವಂತೆ ಕೇಂದ್ರ ಸರ್ಕಾರ ಹಾಗೂ ಕಾರ್ಪೊರೇಟ್ ಕಂಪನಿಗಳನ್ನು ಕೋರಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮನವಿ ಮಾಡಿದ್ದಾರೆ. ಇನ್ನೂ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು, ಅಸ್ಸಾಂ, ಬಿಹಾರ, ತ್ರಿಪುರ ಪ್ರವಾಹಕ್ಕೆ ಸಿಲುಕಿವೆ. ಜನರು ತೊಂದರೆಯಲ್ಲಿದ್ದಾರೆ ಹೀಗಾಗಿ ನೆರವಿನ ಹಸ್ತ ಚಾಚುವಂತೆ ಮನವಿ ಮಾಡಿದ್ದಾರೆ.