Thursday, November 21, 2024

Latest Posts

Indian Coast Guard : ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..!

- Advertisement -

ಇಂಡಿಯನ್ ಕೋಸ್ಟ್​ ಗಾರ್ಡ್(Indian Coast Guard)​ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 11 ಫೋರ್​​ಮ್ಯಾನ್(Foreman)​ ಹುದ್ದೆಗಳು ಖಾಲಿ ಇದ್ದು, ಎಂಎ, ಎಂ.ಕಾಂ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಫೆಬ್ರವರಿ 12 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಅಭ್ಯರ್ಥಿಗಳು ಆಫ್​​ಲೈನ್​(Offline) ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್​ 14 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ joinindiancoastgaurd.gov.in ಗೆ ಭೇಟಿ ನೀಡಬಹುದಾಗಿದೆ.

ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ,

ಹುದ್ದೆಯ ಹೆಸರು : ಫೋರ್​ಮ್ಯಾನ್​ ಹುದ್ದೆಗಳು

ಒಟ್ಟು ಹುದ್ದೆಗಳು : 11

ವಿದ್ಯಾರ್ಹತೆ:
ಇಂಡಿಯನ್ ಕೋಸ್ಟ್​ ಗಾರ್ಡ್​ ನೇಮಕಾತಿ ಅಧಿಸೂಚನೆ ಪ್ರಕಾರ, ಫೋರ್​ಮ್ಯಾನ್​ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ ಕಡ್ಡಾಯವಾಗಿ ಎಂಎ, ಎಂಕಾಂ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಇಂಡಿಯನ್ ಕೋಸ್ಟ್​ ಗಾರ್ಡ್​ ನೇಮಕಾತಿ ಅಧಿಸೂಚನೆ ಪ್ರಕಾರ, ಫೋರ್​ಮ್ಯಾನ್​ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 30 ವರ್ಷ ಮೀರಿರಬಾರದು.

ಉದ್ಯೋಗದ ಸ್ಥಳ:
ಇಂಡಿಯನ್ ಕೋಸ್ಟ್​ ಗಾರ್ಡ್​ ನೇಮಕಾತಿ ಅಧಿಸೂಚನೆ ಪ್ರಕಾರ, ಫೋರ್​ಮ್ಯಾನ್​ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಉದ್ಯೋಗ ನೀಡಲಾಗುತ್ತದೆ.

ವೇತನ:
ಇಂಡಿಯನ್ ಕೋಸ್ಟ್​ ಗಾರ್ಡ್​ ನೇಮಕಾತಿ ಅಧಿಸೂಚನೆ ಪ್ರಕಾರ, ಫೋರ್​ಮ್ಯಾನ್​ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 35,400-1,12,400 ವೇತನ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ 12/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 14/03/2022

ಅರ್ಜಿ ಸಲ್ಲಿಸುವುದು :
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.


ಡೈರೆಕ್ಟರ್-ಜನರಲ್, {PD (ರೆಕ್ಟ್) ಗೆ} ಕೋಸ್ಟ್ ಗಾರ್ಡ್ ಪ್ರಧಾನ ಕಛೇರಿ
ನೇಮಕಾತಿ ನಿರ್ದೇಶನಾಲಯ
C-1, ಹಂತ II, ಕೈಗಾರಿಕಾ ಪ್ರದೇಶ
ಸೆಕ್ಟರ್-62, ನೋಯ್ಡಾ
ಉತ್ತರ ಪ್ರದೇಶ- 201309

- Advertisement -

Latest Posts

Don't Miss