Thursday, December 12, 2024

Latest Posts

ರಾಷ್ಟ್ರಪತಿಗಳ ಕರ್ನಾಟಕ ಪ್ರವಾಸ-ಸ್ವಾಗತ ಮಾಡಿದ ಮುಖ್ಯಮಂತ್ರಿಗಳು

- Advertisement -

ರಾಷ್ಟ್ರೀಯ ಸುದ್ದಿ:

*ಗೌರವಾನ್ವಿತ ರಾಷ್ಟ್ರಪತಿಗಳ ಕರ್ನಾಟಕ ಪ್ರವಾಸ
ಬೆಂಗಳೂರಿಗೆ ಆಗಮಿಸಿದ ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು*

ಬೆಂಗಳೂರು, ಜುಲೈ 03, (ಕರ್ನಾಟಕ ವಾರ್ತೆ) : ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯಲ್ಲಿ ಶ್ರೀ ಸತ್ಯಸಾಯಿ ವಿಶ್ವವಿದ್ಯಾಲಯದ 2ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಹಾಗೂ ಬೆಂಗಳೂರಿನ ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿರುವ ಬುಡಕಟ್ಟು ಸಮುದಾಯದ ಜನತೆಯೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಗೌರವಾನ್ವಿತ ರಾಷ್ಟ್ರಪತಿಗಳಾದ‌ ದ್ರೌಪದಿ ಮುರ್ಮು ಅವರು ಇಂದು ಮಧ್ಯಾಹ್ನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಗೌರವಾನ್ವಿತ ರಾಷ್ಟ್ರಪತಿಗಳನ್ನು ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆತ್ಮೀಯವಾಗಿ ಸ್ವಾಗತಿಸಿದರು.

ಈ ಸಮಯದಲ್ಲಿ ಸಚಿವರಾದ ಕೆ.ಜೆ. ಜಾರ್ಜ್, ಬೈರತಿ ಸುರೇಶ್,ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಬೆಂಗಳೂರು ಪ್ರಾದೇಶಿಕ ಆಯುಕ್ತರಾದ ಆಮ್ಲನ್ ಆದಿತ್ಯ ಬಿಸ್ವಾಸ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೇಜರ್ ಪಿ. ಮಣಿವಣ್ಣನ್, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್, ಬೆಂಗಳೂರು ಪೊಲೀಸ್ ಆಯುಕ್ತರಾದ ಬಿ. ದಯಾನಂದ್, ಬೆಂಗಳೂರು ಜಿಲ್ಲಾಧಿಕಾರಿ ಕೆ‌ ದಯಾನಂದ್, ರಕ್ಷಣಾ ಇಲಾಖೆಯ ಹಿರಿಯ ಅಧಿಕಾರಿಗಳು ಸೇರಿದಂತೆ ಇನ್ನಿತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ನಂತರ ಗೌರವಾನ್ವಿತ ರಾಷ್ಟ್ರಪತಿಯವರು ಚಿಕ್ಕಬಳ್ಳಾಪುರದ‌ ಮುದ್ದೇನಹಳ್ಳಿಯ ಶ್ರೀ ಸತ್ಯ ಸಾಯಿ ವಿಶ್ವವಿದ್ಯಾಲಯದಿಂದ ಆಯೋಜಿಸಿರುವ 2ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ವಿಶೇಷ ಹೆಲಿಕ್ಯಾಪ್ಟರ್ ಮೂಲಕ ಚಿಕ್ಕಬಳ್ಳಾಪುರಕ್ಕೆ ಪ್ರಯಾಣಿಸಿದರು.

ಹಾಸನದಲ್ಲಿ ಉಪನ್ಯಾಸಕರ ಪ್ರತಿಭಟನೆ, ಏನು ಅವರ ಬೇಡಿಕೆಗಳು

ಇಂದು ಉಭಯ ಜಂಟಿ ಅಧಿವೇಶನ , ರಾಜ್ಯಪಾಲರಿಂದ ಭಾಷಣ

ಹೊಸ ಪ್ರತಿಭೆಗಳು ಸೇರಿ ಮಾಡಿರುವ ಕಬ್ಬಡ್ಡಿ ಬ್ರೋ ಸಿನಿಮಾ ರಿಲೀಸ್

- Advertisement -

Latest Posts

Don't Miss