Friday, December 5, 2025

Latest Posts

“ಉಸಿರೇ ಉಸಿರೇ” ಚಿತ್ರತಂಡದಿಂದ ಡೈನಾಮಿಕ್ ಸ್ಟಾರ್ ದೇವರಾಜ್ ಹುಟ್ಟುಹಬ್ಬ ಆಚರಣೆ.

- Advertisement -

ಎನ್ ಗೊಂಬೆ ಲಾಂಛನದಲ್ಲಿ ಪ್ರದೀಪ್ ಯಾದವ್ ನಿರ್ಮಾಣದ “ಉಸಿರೇ ಉಸಿರೇ” ಚಿತ್ರದಲ್ಲಿ ಡೈನಾಮಿಕ್ ಸ್ಟಾರ್ ದೇವರಾಜ್ ಅಭಿನಯಿಸುತ್ತಿದ್ದಾರೆ.

“ಉಸಿರೇ ಉಸಿರೇ” ಚಿತ್ರತಂಡದಿಂದ ದೇವರಾಜ್ ಅವರ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಇದೇ ಸಂದರ್ಭದಲ್ಲಿ “ಉಸಿರೇ ಉಸಿರೇ” ಚಿತ್ರದಲ್ಲಿನ ದೇವರಾಜ್ ರವರ ವಿಭಿನ್ನ ಪಾತ್ರದಲ್ಲಿನ ಪೋಸ್ಟರ್ ಮತ್ತು ಮೇಕಿಂಗ್ ವಿಡಿಯೋ ಒಂದನ್ನು ಬಿಡುಗಡೆ ಮಾಡಲಾಯಿತು.

“ಬಿಗ್ ಬಾಸ್” ಖ್ಯಾತಿಯ ರಾಜೀವ್ ಈ ಚಿತ್ರದ ನಾಯಕ. ಶ್ರೀಜಿತ ನಾಯಕಿ. ತಾರಾ, ಸುಚೇಂದ್ರ ಪ್ರಸಾದ್, ರಾಜೇಶ್ ನಟರಂಗ, ಆಲಿ, ಬ್ರಹ್ಮಾನಂದಮ್, ಸಾಧುಕೋಕಿಲ, ದೇವರಾಜ್, ಮಂಜು ಪಾವಗಡ, ಜಗಪ್ಪ, ಶಿವು, ಸುಶ್ಮಿತಾ ಮುಂತಾದವರು ತಾರಾಬಳಗದಲ್ಲಿದ್ದಾರೆ. ವಿಶೇಷ ಪಾತ್ರದಲ್ಲಿ ಕಿಚ್ಚ ಸುದೀಪ್ ಅಭಿನಯಿಸುತ್ತಿದ್ದಾರೆ.

ಸಿ.ಎಂ.ವಿಜಯ್ ನಿರ್ದೇಶನದ ಈ ಚಿತ್ರಕ್ಕೆ ಮನು ಛಾಯಾಗ್ರಹಣ, ಕೆ ಎಂ ಪ್ರಕಾಶ್ ಸಂಕಲನ, ಟೈಗರ್ ಶಿವು ಸಾಹಸ ನಿರ್ದೇಶನ ಹಾಗೂ ಮೋಹನ್ ಮತ್ತು ಹೈಟ್ ಮಂಜು ಅವರ ನೃತ್ಯ ನಿರ್ದೇಶನವಿದೆ ವಿವೇಕ್ ಚಕ್ರವರ್ತಿ ಈ ಚಿತ್ರದ ಸಂಗೀತ ನಿರ್ದೇಶಕರು.

- Advertisement -

Latest Posts

Don't Miss