Friday, November 28, 2025

Latest Posts

ಕೂಲಿ ಕೆಲಸ ಮಾಡಿ ಕಾಲೇಜು ಸೇರಿದ ಶಾಂತರಾಮರಿಗೆ ಎಂಎಲ್‌ಸಿ ಭಾಗ್ಯ

- Advertisement -

ಉತ್ತರಕನ್ನಡ ಜಿಲ್ಲೆಯ ಶಾಂತಾರಾಮ ಸಿದ್ಧಿಯವರಿಗೆ ಎಂಎಲ್‌ಸಿ ಸ್ಥಾನದೊರೆತಿದೆ. ಯಾರು ಈ ಶಾಂತಾರಾಮ ಸಿದ್ಧಿ ಅಂದ್ರಾ.. ಆ ಬಗ್ಗೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಉತ್ತರ ಕನ್ನಡ ಜಿಲ್ಲೆಯ ಸಿದ್ದಿ ಸಮುದಾಯದಲ್ಲಿ ಶಾಂತರಾಮ್ ಸಿದ್ದಿ ಅವರ ಹೆಸರು ದೊಡ್ಡದು. 55 ವರ್ಷ ವಯಸ್ಸನ್ನು ಅರ್ಥಪೂರ್ಣವಾಗಿ ಕಳೆದ ಶಾಂತರಾಮ್ ಸಿದ್ದಿಯವರು ಯಲ್ಲಾಪುರ ತಾಲೂಕಿನ ಹಿತ್ನಳ್ಳಿ ಗ್ರಾಮ ಪಂಚಾಯಿತಿಯ ಪುರ್ಲೆ ಮನೆಯ ಕಡು ಬಡತನದ ಕುಟುಂಬದಿಂದ ಬಂದವರು.

ಮೂರು ದಶಕಗಳಿಂದ ಪಶ್ಚಿಮ ಘಟ್ಟದ ವನವಾಸಿಗಳ ನಡುವೆ ಕೆಲಸ ಮಾಡುತ್ತಿರುವ ಶಾಂತಾರಾಮ ಸಿದ್ದಿ, ಸಿದ್ದಿ ಸಮುದಾಯದ ಮೊದಲ ಪದವೀಧರ. ಇವರ ಊರು ಶಿರಸಿ – ಯಲ್ಲಾಪುರ ನಡುವಿನ ಹಿತ್ಲಳ್ಳಿ ಗ್ರಾಮ.

ಸಿದ್ದಿ ಸಮುದಾಯದಲ್ಲಿ ಅಕ್ಷರ ಎನ್ನುವ ಅರಿವಿರದ ಆ ಸಮಯದಲ್ಲಿಯೇ ಇಡೀ ಸಿದ್ದಿ ಜನಾಂಗದಲ್ಲಿ ಏಳನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ ಕೇಂದ್ರಕ್ಕೆ ಪ್ರಥಮ ಸ್ಥಾನಗಳಿಸಿದ ಕೀರ್ತಿ ಇವರದ್ದು. ಅಲ್ಲಿಗೆ ಶಿಕ್ಷಣವನ್ನು ಬಿಟ್ಟು ದುಡುಮೆಗಾಗಿ ಹೊರಟ ಇವರನ್ನು ತಡೆದ ಇವರ ಶಿಕ್ಷಕರು ಅಂಕೋಲದ ಮದರ್ ತೆರೇಸಾ ಪ್ರೊ.ನಿರ್ಮಲ ಗಾಂವ್ಕರ್ ಅವರ ಆಶ್ರಮದಲ್ಲಿ ಪಿ.ಎಂ.ಹೆಚ್.ಎಸ್.ಗೆ ಸೇರಿಸಿದರು. ನಂತರ ಕಾಲೇಜು ಶಿಕ್ಷಣಕ್ಕಾಗಿ ಕಾರವಾರದಲ್ಲಿ ಕೂಲಿ ಕೆಲಸ ಮಾಡಿ ಕಾಲೇಜು ಶಿಕ್ಷಣ ಪೂರೈಸಿದ ಸಿದ್ದಿ ಜನಾಂಗದ ಮೊದಲ ಪದವೀಧರ ಕೂಡ ಇವರಾಗಿದ್ದಾರೆ.

ನಂತರ ಆರ್.ಎಸ್.ಎಸ್ ಸಕ್ರಿಯ ಕಾರ್ಯಕರ್ತರಾಗಿ ವನವಾಸಿ ಕಲ್ಯಾಣ ಸಂಸ್ಥೆಯನ್ನು ಕರ್ನಾಟಕ ರಾಜ್ಯದಲ್ಲಿ ಪ್ರಥಮವಾಗಿ ಮುಂಡಗೋಡಿನ ಚಿಪಗಿಯಲ್ಲಿ ಪ್ರಾರಂಭಿಸಿದರು. ಆ ಸಂಸ್ಥೆಯಲ್ಲಿ 32 ವರ್ಷಗಳ ಕಾಲ ಸೇವೆ ಸಲ್ಲಿಸಿದ ಅವರು ಇಂದು ಇದೇ ಸಂಸ್ಥೆಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತಿದ್ದಾರೆ. ಇವರ ಮಾತೃ ಭಾಷೆ ಕೊಂಕಣಿಯಾದರೂ ಕನ್ನಡ ಭಾಷೆಯ ಅಭಿಮಾನ ಇವರದ್ದು. ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯ ಸದಸ್ಯರಾಗಿರುವ ಇವರು, ಕೊಂಕಣಿ ಅಕಾಡಮಿ ಸದಸ್ಯರಾಗಿ ಎರಡು ಅವಧಿ ಸೇವೆ ಸಲ್ಲಿಸಿದ್ದಾರೆ.

ಪಶ್ಚಿಮ ಘಟ್ಟ ಕಾರ್ಯಪಡೆಯ ಸದಸ್ಯರಾಗಿದ್ದು ಆಕಾಶವಾಣಿಯ ಸಲಹಾ ಸಮಿತಿಯ ಸದಸ್ಯರಾಗಿರುವುದಲ್ಲದೇ, ಹತ್ತು ಹಲವು ಸಂಘಟನೆಗಳ ಮೂಲಕ ಸದಾ ಸಮಾಜಮುಖಿಯಾಗಿ ಕೆಲಸ ಮಾಡುವ ಅತ್ಯಂತ ಸರಳ ವ್ಯಕ್ತಿ. ಬಡತನದಲ್ಲಿಯೇ ಇರುವ ಇವರು ಪದವಿ ಮುಗಿಸಿದ ಮಗಳು ಪಿ.ಯು.ಸಿ ಓದುವ ಓರ್ವ ಮಗ ಹಾಗೂ ಪತ್ನಿಯೊಂದಿಗೆ ಸಾಮಾನ್ಯ ಜೀವನ ನಡೆಸುತ್ತಿದ್ದಾರೆ. ಯಾವುದೇ ರಾಜಕೀಯ ಪ್ರಭಾವ ಬಳಸದೆ ಕಾಡಿನಲ್ಲಿ ಬದುಕು ಕಳೆಯುತ್ತಿರುವ ಸಿದ್ದಿ ಜನಾಂಗದ ಅಭಿವೃದ್ಧಿಗಾಗಿ ಹಾಗೂ ಹಸಿರು ಉಳಿವಿಗಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟು ಹೋರಾಟದ ಬದುಕು ಕಟ್ಟಿಕೊಂಡಿರುವ ಶಾಂತರಾಮ್ ಸಿದ್ದಿಯವರಿಗೆ ಎಂ ಎಲ್‌ ಸಿ ಸ್ಥಾನ ದೊರೆತಿದ್ದು ಸಿದ್ದಿ ಜನಾಂಗಕ್ಕೆ ನೀಡಿದ ಗೌರವವಾಗಿದೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

- Advertisement -

Latest Posts

Don't Miss