ಅಂಬೇಡ್ಕರ್ ಪ್ರತಿಮೆಗೆ ಅವಮಾನ, ಒಂದು ಗಂಟೆ ರಸ್ತೆ ತಡೆದು ಆಕ್ರೋಶ ಹೊರಹಾಕಿದ ದಲಿತ ಸಂಘಟನೆಗಳು

Hubballi News: ಹುಬ್ಬಳ್ಳಿ: ಕಲಬುರ್ಗಿ ಜಿಲ್ಲೆಯ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಯನ್ನು ಅಶುದ್ಧಗೊಳಿಸಿರುವುದನ್ನು ಖಂಡಿಸಿ ಹಳೇ ಹುಬ್ಬಳ್ಳಿಯಲ್ಲಿ ಗುರುವಾರ ವಿವಿಧ ದಲಿತ ಸಂಘಟನೆಗಳ ಸದಸ್ಯರು ಕಾರವಾರ ರಸ್ತೆ ತಡೆದು ಅಂಗಡಿ ಮುಂಗಟ್ಟುಗಳನ್ನು ಬಂದು ಮಾಡಿಸಿ ಪ್ರತಿಭಟನೆ ನಡೆಸಿದರು.

ಡಾಕ್ಟರ್ ಬಿ ಆರ್ ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಮಾರುತಿ ದೊಡ್ಡಮನಿ ಸಮತಾ ಸೇನೆ ಅಧ್ಯಕ್ಷ ಗುರುನಾಥ ಉಳ್ಳಿಕಾಶಿ ಮಾತನಾಡಿ, ಜಿಲ್ಲೆಯ ಕೋಟನೂರನಲ್ಲಿರುವ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಕೆಲ ಕಿಡಿಗೇಡಿಗಳು ಅವಮಾನ ಮಾಡಿ ಪಟಾಕಿ ಸಿಡಿಸಿ, ತಮ್ಮ ವಿಕೃತ ಬುದ್ದಿ ಪ್ರದರ್ಶಿಸಿದ್ದು, ಇಂತಹ ವಿಕೃತ ಮನಸ್ಥಿತಿಯಲ್ಲಿ ಇನ್ನೂ ಬದುಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಡಳಿತವು ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿ ರಕ್ಷಣೆ ಮಾಡುವಲ್ಲಿ ಸಂಪೂರ್ಣ ವಿಫಲವಾಗಿದ್ದಾರೆ, ನಾಲ್ಕು ಜನ ಆರೋಪಿಗಳ ಬಂಧನ ಮಾಡಿದ್ದು, ಇನ್ನೂ ಒಬ್ಬನನ್ನು ಕೂಡಲೇ ಬಂಧನ ಮಾಡಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಮಾರುತಿ ದೊಡ್ಡಮನಿ ಸಮತಾ ಸೇನೆ ಅಧ್ಯಕ್ಷ ಗುರುನಾಥ್ ಉಳ್ಳಿಕಾಶಿ ಸೇರಿದಂತೆ ದಲಿತ ಮುಖಂಡರು ಭಾಗವಹಿಸಿದ್ದರು.

2024ರಲ್ಲಿ ಜಗತ್ತಿಗೆ ಒಳ್ಳೆಯ ದಿನಗಳಿಲ್ಲ: ಕೋಡಿಮಠದ ಸ್ವಾಮೀಜಿ ಭವಿಷ್ಯ

ಸಂಗೀತ ನಿರ್ದೇಶಕ ಇಳಯರಾಜ ಪುತ್ರಿ ಭವತಾರಿಣಿ ನಿಧನ

ವಿಜಯಲಕ್ಷ್ಮೀ ದರ್ಶನ್ ಆರೋಪಕ್ಕೆ ಪ್ರತಿಕ್ರಿಯಿಸಿದ ಪವಿತ್ರಾ ಗೌಡ

About The Author