ರಜತ್ ಪಾಟಿದಾರ್ ಪಾದದ ನೋವಿನ ಕಾರಣ ಐಪಿಎಲ್​ನಿಂದ ಹೊರಗೆ

sports news:

ಐಪಿಎಲ್​ನ ತನ್ನ ಮೊದಲ ಪಂದ್ಯದಲ್ಲಿ ಮುಂಬೈ ತಂಡಕ್ಕೆ ಸೋಲುಣಿಸಿ ಶುಭಾರಂಭ ಮಾಡಿದ್ದ ಆರ್​ಸಿಬಿಗೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಟಗಾರ ಐಪಿಎಲ್​ನಿಂದ ಹೊರಬಿದ್ದಿದ್ದಾರೆ. ಆರ್​ಸಿಬಿ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್ ರಜತ್ ಪಾಟಿದಾರ್ ಪಾದದ ನೋವಿನ ಕಾರಣ ಐಪಿಎಲ್​ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಈ ಹಿಂದೆ ಪಾಟಿದಾರ್ ಐಪಿಎಲ್​ನ ಮೊದಲಾರ್ಧದಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ವರದಿಯಾಗಿತ್ತು. ಆದರೀಗ ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಸಾಕಷ್ಟು ಸಮಯ ತೆಗೆದುಕೊಳ್ಳಲಿದೆ ಎಂದು ಎನ್‌ಸಿಎ ವೈದ್ಯರು ತಿಳಿಸಿದ್ದಾರೆ. ಹೀಗಾಗಿ ಪಾಟಿದಾರ್ ಈ ಬಾರಿಯ ಐಪಿಎಲ್​ನಿಂದ ಹೊರಗುಳಿಯುವ ನಿರ್ಧಾರ ತೆಗೆದುಕೊಂಡಿದ್ದಾರೆ. ಕಳೆದ ಸೀಸನ್​ನಲ್ಲಿ ಆರ್​ಸಿಬಿ ಪರ 3ನೇ ಕ್ರಮಾಂಕದಲ್ಲಿ ಆಡಿದ್ದ ರಜತ್ ಒಟ್ಟು 333 ರನ್​ ಬಾರಿಸಿದ್ದರು. ಅಲ್ಲದೆ ಆರ್​ಸಿಬಿ ಪರ ಅತ್ಯಧಿಕ ರನ್ ಕಲೆಹಾಕಿದ ಮೂರನೇ ಆಟಗಾರನಾಗಿ ಹೊರಹೊಮ್ಮಿದ್ದರು. ಇದೀಗ ಪ್ರಮುಖ ಆಟಗಾರ ಹೊರಗುಳಿಯುತ್ತಿರುವುದು ಆರ್​ಸಿಬಿ ತಂಡಕ್ಕೆ ಹಿನ್ನಡೆಯನ್ನುಂಟು ಮಾಡಲಿದೆ.

ಐಪಿಎಲ್ ಇರುವ ಕಾರಣ ತಡರಾತ್ರಿಯವರೆಗೂ ಮೆಟ್ರೋ ಸಂಚಾರ

ತಂದೆ ನಾಪತ್ತೆಯಾದ ಬಗ್ಗೆ ದೂರು ದಾಖಲಿಸಿದ ಕ್ರಿಕೆಟಿಗ ಕೇದಾರ್ ಜಾದವ್ .ಪತ್ತೆ ಹಚ್ಚುವಲ್ಲಿ ಯಶಸ್ವಿಯಾದ ಪೊಲೀಸರು.

ಭಾರತದ ಕುಸ್ತಿ ಪಟುವಿಗೆ ವಿಶ್ವ ಚಾಂಪಿಯನ್ ಪಟ್ಟ

About The Author