Monday, April 14, 2025

Latest Posts

IPL-ಅಂತಿಮ ಸ್ಥಾನದಲ್ಲಿ ಸನ್ ರೈಸರ್ಸ್ ಹೈದರಾಬಾದ್..!

- Advertisement -

www.karnatakatv.net :ಎರಡನೇ ಹಂತದ ನಾಲ್ಕನೇ ಪಂದ್ಯ ಸೆ. 22 ರಂದು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.  

ಪ್ರಸ್ತುತ ಅಂಕಪಟ್ಟಿಯಲ್ಲಿ  ದ್ವೀತಿಯ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋತು ಅಂಕಪಟ್ಟಿಯಲ್ಲಿ ಅಂತಿಮ ಸ್ಥಾನಕ್ಕೆ ಸನ್ ರೈಸರ್ಸ್ ಹೈದರಾಬಾದ್ ತಂಡವು ಬಂದಿದೆ.  ಈ ಟೂರ್ನಿಯಲ್ಲಿ 8 ಪಂದ್ಯಗಳನ್ನು ಆಡಿದ ಡೆಲ್ಲಿ ಕ್ಯಾಪಿಟಲ್ಸ್ 6 ಪಂದ್ಯಗಳಲ್ಲಿ ಜಯಗಳಿಸಿದ್ದು. ಆದರೆ 2 ಪಂದ್ಯಗಳಲ್ಲಿ ಮಾತ್ರ ಸೋಲನ್ನು ಅನುಭವಿಸಿದೆ. 12 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ದ್ವೀತಿಯ ಸ್ಥಾನದಲ್ಲಿ ಇದೆ. ಸನ್ ರೈಸರ್ಸ್ ಹೈದರಾಬಾದ್ ತಂಡ 7 ಪಂದ್ಯಗಳನ್ನು ಆಡಿ ಕೇವಲ ಒಂದೇ ಪಂದ್ಯದಲ್ಲಿ ಜಯಗಳಿಸಿದ್ದಾರೆ. ಅದೇರೀತಿ 6 ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿ ಅಂಕಪಟ್ಟಿಯಲ್ಲಿ ಅಂತಿಮ ಸ್ಥಾನಕ್ಕೆ ತೃಪ್ತಿಪಡೆದುಕೊಂಡಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ಮದ್ಯ ನಡೆದ ಈ ಪಂದ್ಯದಲ್ಲಿ ಅಮಿತ್ ಮಿಶ್ರಾ  ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಆಡಲಿರುವ 100ನೇ ಐಪಿಎಲ್ ಪಂದ್ಯವಾಗಲಿದೆ. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ 100 ಪಂದ್ಯಗಳನ್ನಾಡಿದ ಮೊದಲ ಆಟಗಾರ ಎಂಬ ಮೈಲಿಗಲ್ಲನ್ನು ಅಮಿತ್ ಮಿಶ್ರಾ ಮುಟ್ಟಲಿದ್ದಾರೆ. ಐಪಿಎಲ್ ಇತಿಹಾಸದಲ್ಲಿಯೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಳ್ಳಲು ಅಮಿತ್ ಮಿಶ್ರಾಗೆ 5 ವಿಕೆಟ್‍ಗಳ ಅಗತ್ಯವಿದ್ದು,  ಲಸಿತ್ ಮಾಲಿಂಗ 170 ಟಿಕೆಟ್ ಪಡೆದುಕೊಳ್ಳುವುದರ ಮೂಲಕ ಅತಿಹೆಚ್ಚು ಐಪಿಎಲ್ ವಿಕೆಟ್ ಪಡೆದ ಆಟಗಾರ ಎನಿಸಿಕೊಂಡಿದ್ದಾರೆ. ಸದ್ಯ ಇಲ್ಲಿಯವರೆಗೂ 166 ಐಪಿಎಲ್ ವಿಕೆಟ್ ಪಡೆದಿರುವ ಅಮಿತ್ ಮಿಶ್ರಾ ಈ ಪಂದ್ಯದಲ್ಲಿ 5 ವಿಕೆಟ್ ಪಡೆದರೆ ಐಪಿಎಲ್ ಇತಿಹಾಸದಲ್ಲಿಯೇ ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರ ಎಂಬ ದಾಖಲೆಯನ್ನು ನಿರ್ಮಿಸಲಿದ್ದಾರೆ.



- Advertisement -

Latest Posts

Don't Miss