ಅಹಮದಾಬಾದ್:ಗುಜರಾತ್ ಟೈಟಾನ್ಸ್ ಟೂರ್ನಿಯಲ್ಲಿ ಸಾಕಷ್ಟು ಏಳು ಬೀಳುಗಳನ್ನು ಕಂಡು ಮೊದಲ ಪ್ರಯತ್ನದಲ್ಲೆ 15ನೇ ಆವೃತ್ತಿಯ ಐಪಿಎಲ್ ಪ್ರಶಸ್ತಿಯನ್ನು ಎತ್ತಿ ಹಿಡಿದಿದೆ.
ಆದರೆ ಫೈನಲ್ ಪಂದ್ಯ ಮುಗಿದ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಕೆಲವರು ಗುಜರಾತ್ ಗೆಲುವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.
ಹೌದು ಐಪಿಎಲ್ ನ ಫೈನಲ್ ಪಂದ್ಯ ಫಿಕ್ಸಿಂಗ್ ಎಂದು ಕೆಲವರು ಟ್ವೀಟ್ ಮಾಡಿದ್ದಾರೆ. ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ ರಾಜಸ್ಥಾನ ವಿರುದ್ಧ ಫೈನಲ್ ನಲ್ಲಿ 7 ವಿಕೆಟ್ ಗಳ ಅಂತರದಿಂದ ಗೆದ್ದು ಬೀಗಿತು.
ತಂಡದಲ್ಲಿ ಹೇಳಿಕೊಳ್ಳುವಂತಹ ಸ್ಟಾರ್ ಆಟಗಾರರಿಲ್ಲ.ನೆಟ್ಟಿಗರು ಈ ಎಲ್ಲಾ ಕಾರಣಗಳನ್ನಿಟ್ಟುಕೊಂಡು ಮ್ಯಾಚ್ ಫಿಕ್ಸಿಂಗ್ ಅನ್ನುತ್ತಿದ್ದಾರೆ. ಜೊತೆಗೆ ಕೆಲ ಫೋಟೋಗಳು ಇದಕ್ಕೆ ಪುಷ್ಠಿ ನೀಡುತ್ತಿವೆ.
ಅಹಮದಾಬಾದ್ ನಲ್ಲಿ ಪಂದ್ಯ ನಡೆದಿರೋದು ಯಾಕೆ ಎಂದು ಪ್ರಶ್ನಿಸಿದ್ದಾರೆ. ಫೋಟೋದಲ್ಲಿ ನಾಯಕ ಹಾರ್ದಿಕ್ ಪಾಂಡ್ಯ ಹಾಗೂ ಬಿಸಿಸಿಐ ಕಾರ್ಯದರ್ಶಿ ಕೇಂದ್ರ ಸಚಿವ ಅಮಿತ್ ಶಾ ಅವರ ಮಗ ಜಯ್ ಶಾ ಬಳಿ ಗುಟ್ಟಾಗಿ ಏನೋ ಮಾತನಾಡುತ್ತಿರುವ ಫೋಟೋ ವೈರಲ್ ಆಗಿದೆ.
ಇದು ಚೇಸಿಂಗ್ ಪಿಚ್ ಎಂದು ಗೊತ್ತಿದ್ದೂ ರಾಜಸ್ಥಾನ ತಂಡದ ನಾಯಕ ಸಂಜು ಸ್ಯಾಮ್ಸನ್ ಟಾಸ್ ಗೆದ್ದಾಗ ಯಾಕೆ ಬ್ಯಾಟಿಂಗ್ ತೆಗೆದುಕೊಂಡರು ಎಂದು ಪ್ರಶ್ನಿಸಿದ್ದಾರೆ.