ಮುಂಬೈ: ಪ್ರಸಕ್ತ ಐಪಿಎಲ್‍ಗೆ ಕರೋನಾ ಕರಿ ನೆರಳು ಬಿದ್ದಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ಐವರಿಗೆ ಸೋಂಕು ಇರುವುದು ದೃಢಪಟ್ಟಿದೆ.
ಆಸ್ಟ್ರೇಲಿಯಾ ಆಲ್ರೌಂಡರ್ ಮಿಚೆಲ್ ಮಾರ್ಷ್‍ಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೂಲಗಳ ಪ್ರಕಾರ ಮಿಚೆಲ್ ಮಾರ್ಷ್ ಅಲ್ಲದೇ ಡೆಲ್ಲಿ ಕ್ಯಾಪಿಟಲ್ಸ್ ಸಾಮಾಜಿಕ ಜಾಲತಾಣದ ಒಬ್ಬ ಸದಸ್ಯ ಹಾಗೂ ಮೂರು ಹೋಟೆಲ್ ಸಿಬ್ಬಂದಿಗಳಿಗೆ ಪಾಸಿಟಿವ್ ಕಂಡು ಬಂದಿದೆ.
ಮೊನ್ನೆಯಷ್ಟೆ ತಂಡದ ಫಿಸಿಯೊ ಪ್ಯಾಟ್ರಿಕ್ ಫರ್ಹಾರ್ತ್ ಕೋವಿಡ್ ಸೋಂಕಿಗೆ ಗುರಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ಆಟಗಾರರ ಮೇಲೆ ನಡೆಸಿದ ಮೊದಲ ಸುತ್ತಿನ ಆರ್‍ಟಿ-ಪಿಸಿಆರ್ ಪರೀಕ್ಷೆಯಲ್ಲಿ ನೆಗೆಟಿವ್ ಫಲಿತಾಂಶ ಬಂದಿತ್ತು.
ಮತ್ತೊಂದು ಸುತ್ತಿನ ಆರ್‍ಟಿ-ಪಿಸಿಆರ್ ಪರೀಕ್ಷೆ ನಡೆಸಲು ಬಿಸಿಸಿಐ ವೈದ್ಯಕೀಯ ತಂಡವೊಂದನ್ನ ಕಳುಹಿಸಲಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೊನ್ನೆ ಸೋಮವಾರ ಕ್ವಾರಂಟೈನ್‍ಗೆ ಒಳಪಟ್ಟಿದ್ದು ಪುಣೆ ಪ್ರವಾಸವನ್ನು ರದ್ದು ಮಾಡಿದೆ.
ಬುಧವಾರ ಪಂಜಾಬ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಆಡಬೇಕಿದೆ. ನಾಳೆ ಡೆಲ್ಲಿ ಮತ್ತು ಪಂಜಾಬ್ ನಡುವಿನ ಪಂದ್ಯ ನಡೆಯುವ ಕುರಿತು ಐಪಿಎಲ್ ಆಡಳಿತ ಮಂಡಳಿ ನಿರ್ಧಾರ ಕೈಗೊಳ್ಳಲಿದೆ .