ಗುಜರಾತ್ ಟೈಟಾನ್ಸ್ 15ನೇ ಆವೃತ್ತಿಯ ಚಾಂಪಿಯನ್ನಾಗಿ ಹೊರಹೊಮ್ಮಿದೆ. ಮೊಟೇರಾ ಅಂಗಳದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ರಾಜಸ್ಥಾನ ರಾಯಲ್ಸ್ ವಿರುದ್ಧ 7 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿತು.ವಿಷೇವೆಂದರೆ ಚೊಚ್ಚಲ ಪ್ರಯತ್ನದಲ್ಲೇ ಗುಜರಾತ್ ಟೈಟಾನ್ಸ್ ಐಪಿಎಲ್ ಟ್ರೋಫಿಗೆ ಮುತ್ತಿಕ್ಕಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ತಂಡ ನಾಯಕ ಹಾರ್ದಿಕ್ ಪಾಂಡ್ಯ, ಸಾಯಿಕಿಶೋರ್ ಅವರ ಸಂಘಟಿತ ದಾಳಿಗೆ ತತ್ತರಿಸಿ ಹೋಯ್ತು.ರಾಜಸ್ಥಾನ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ ಕೇವಲ 130 ರನ್ ಗಳಿಸಿತು.
ಸುಲಭ ಗುರಿ ಪಡೆದ ಗುಜರಾತ್ ತಂಡ ಆರಂಭದಲ್ಲೆ 2 ವಿಕೆಟ್ ಪಡೆದು ಆಘಾತ ಅನುಭವಿಸಿತು. ನಂತರ ಶುಭಮನ್ ಗಿಲ್ ಒಂದು ಜೀವದಾನ ಪಡೆದು ಎಚ್ಚರಿಕೆಯ ಬ್ಯಾಟಿಂಗ್ ಮಾಡಿ ಸಿಕ್ಸರ್ ಹೊಡೆಯುವ ಮೂಲಕ ತಂಡಕ್ಕೆ ಭರ್ಜರಿ ಗೆಲುವು ತಂದುಕೊಟ್ಟರು. ಗುಜರಾತ್ ಟೈಟಾನ್ಸ್ 18.1 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 133 ರನ್ ಕಲೆ ಹಾಕಿತು.
ಟೈಟಾನ್ಸ್ ಪರ ವೃದ್ದಿಮಾನ್ ಸಾಹಾ 5, ಶುಭಮನ್ ಗಿಲ್ ಅಜೇಯ45, ಮ್ಯಾಥೀವ್ ವೇಡ್ 8, ಮೂರನೆ ವಿಕೆಟ್ಗೆ ಗಿಲ್ ಜೊತೆಗೂಡಿದ ನಾಯಕ ಹಾರ್ದಿಕ್ ಪಾಂಡ್ಯ 63 ರನ್ ಸೇರಿಸಿದರು. ಇದು ತಂಡವನ್ನು ಗೆಲುವಿನತ್ತ ಸಾಗಿಸಿತು.
ನಾಯಕ ಹಾರ್ದಿಕ್ ಪಾಂಡ್ಯ 34, ಡೇವಿಡ್ ಮಿಲ್ಲರ್ ಅಜೇಯ 32 ರನ್ ಗಳಿಸಿದರು. ಟ್ರೆಂಟ್ ಬೌಲ್ಟ್ , ಪ್ರಸಿದ್ಧ ಕೃಷ್ಣ, ಹಾಗೂ ಚಾಹಲ್ ತಲಾ 1 ವಿಕೆಟ್ ಪಡೆದರು.
ಆಲ್ರೌಂಡ್ ಆಟ ಪ್ರದರ್ಶಿಸಿದ ಹಾರ್ದಿಕ್ ಪಾಂಡ್ಯ ಪಂದ್ಯ ಶ್ರೇಷ್ಠ ಹಾಗೂ ಜೋಸ್ ಬಟ್ಲರ್ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.

