Tuesday, July 22, 2025

Latest Posts

7-ಸೀಟರ್ ಕಾರು ಇಷ್ಟು ಕಡಿಮೆನಾ? : ಮಾರುಕಟ್ಟೆಗೆ ಮಸ್ತ್‌ ಕಾರ್‌ ಎಂಟ್ರಿ

- Advertisement -

ಇತ್ತೀಚೆಗೆ ಹೊಚ್ಚ ಹೊಸ Kia Carens Clavis EV ಯನ್ನು ಅದ್ದೂರಿಯಾಗಿ ಮಾರಾಟಕ್ಕೆ ತರಲಾಗಿತ್ತು. ಇದೊಂದು ಸ್ವದೇಶಿ ನಿರ್ಮಿತ ಎಲೆಕ್ಟ್ರಿಕ್ ಎಂಪಿವಿಯಾಗಿದ್ದು, ಆಂಧ್ರ ಪ್ರದೇಶದಲ್ಲಿರುವ ಕಂಪನಿಯ ಬೃಹತ್ ಉತ್ಪಾದನಾ ಘಟಕದಲ್ಲಿ ತಯಾರಿಸಲಾಗುತ್ತಿದೆ. ಈ ಕಾರು ಅತ್ಯಾಧುನಿಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಕೂಡ ಪಡೆದುಕೊಂಡಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಖರೀದಿಗೆ ಲಭ್ಯವಿದೆ. ಹೆಚ್ಚಿನ ಆಸನಗಳನ್ನು ಹೊಂದಿರುವುದರಿಂದ 2 ಕುಟುಂಬಗಳು ಸುಲಭವಾಗಿ ಪ್ರಯಾಣ ಮಾಡಬಹುದಾಗಿದೆ.

ನಾಳೆಯಿಂದ ಇದೇ Kia Carens Clavis EV ಗಾಗಿ ಬುಕ್ಕಿಂಗ್‌ನ್ನು ತೆರೆಯಲಾಗುವುದು ಎಂದು ಕಂಪನಿಯು ಘೋಷಣೆ ಮಾಡಿದೆ. ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ಬಿಡುಗಡೆಗೊಳಿಸಿದೆ. ಆಸಕ್ತ ಗ್ರಾಹಕರು ಸಮೀಪದ ಡೀಲರ್‌ಶಿಪ್‌ ಅಥವಾ ಕಂಪನಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ರೂ.25,000 ಮುಂಗಡ ಹಣ ಪಾವತಿಸುವುದರೊಂದಿಗೆ ಆರ್ಡರ್ ಮಾಡಬಹುದು. ಕೆಲವೇ ದಿನಗಳಲ್ಲಿ ವಿತರಣೆಯು ಆರಂಭವಾಗಲಿದೆ.

Kia Carens Clavis EV ವಿಶೇಷತೆಗಳೇನು:-
ಇದು ಅತಿ ಕಡಿಮೆ ಬೆಲೆಯಲ್ಲಿಯೂ ಗ್ರಾಹಕರ ಖರೀದಿಗೆ ಲಭ್ಯವಿದೆ. 17.99 ಲಕ್ಷದಿಂದ 24.49 ಲಕ್ಷ ಬೆಲೆಯನ್ನು ಹೊಂದಿದೆ. ಹೆಚ್‌ಟಿಕೆ ಪ್ಲಸ್, HTX ಮತ್ತು HTX plus ಎಂಬ 3 ಆಕರ್ಷಕ ವೇರಿಯೆಂಟ್ ಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಈ ಎಲೆಕ್ಟ್ರಿಕ್ ಕಾರು ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ತ್ರೈ-ಅಂಗುಲರ್ ಶೇಪ್ಡ್ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲ್ಯಾಂಪ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು & ಅಲಾಯ್ ವೀಲ್‌ಗಳನ್ನು ಪಡೆದಿದೆ.

ಗ್ರಾವಿಟಿ ಗ್ರೇ, ಅರೋರಾ ಬ್ಲ್ಯಾಕ್ ಪರ್ಲ್, ಪ್ಯೂಟರ್ ಆಲಿವ್ ಮತ್ತು ಇಂಪೀರಿಯಲ್ ಬ್ಲೂ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ಸಿಗುತ್ತದೆ. 4550 ಎಂಎಂ ಉದ್ದ, 1800 ಎಂಎಂ ಅಗಲ, 1730 ಎಂಎಂ ಎತ್ತರ ಹಾಗೂ 2780 ವೀಲ್‌ಬೇಸ್‌ನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 404 ರಿಂದ 490 ಕಿಲೋಮೀಟರ್ ಮೈಲೇಜ್ ನೀಡುತ್ತದೆ.

ವರದಿ:ರಂಜಿತ ರೇವಣ್ಣ ನಾಟನಹಳ್ಳಿ

- Advertisement -

Latest Posts

Don't Miss