Tuesday, July 15, 2025

Latest Posts

ದೇವರ ಪ್ರಸಾದ ವಿಷವಾಯ್ತಾ? : 50ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

- Advertisement -

ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಮಾಲೆಕಲ್ ತಿರುಪತಿ ಗ್ರಾಮದಲ್ಲಿ ಇರುವ ವೆಂಕಟೇಶ್ವರ ಸ್ವಾಮಿ ದೇಗುಲದ ಜಾತ್ರೆಯಲ್ಲಿ ಆಹಾರ ಸೇವಿಸಿದ್ದ 50ಕ್ಕೂ ಹೆಚ್ಚು ಭಕ್ತರು ಅಸ್ವಸ್ಥರಾಗಿದ್ದಾರೆ. ಈ ದೇಗುಲ ಚಿಕ್ಕ ತಿರುಪತಿ ಎಂದೇ ಪ್ರಸಿದ್ಧವಾಗಿದ್ದು, ಜಾತ್ರೆಗೆ ಸಾವಿರಾರು ಜನ ಆಗಮಿಸಿದ್ದು, ಭಾನುವಾರ ರಾತ್ರಿ ಸುಮಾರು ಒಂದುವರೆ ಸಾವಿರ ಜನರಿಗೆ ಆಹಾರ ವಿತರಣೆ ಮಾಡಲಾಗಿತ್ತು.

ಭಾನುವಾರ ರಾತ್ರಿ 7.30 ರಿಂದ ಖಾಸಗಿ ಸಂಸ್ಥೆಯೊಂದರ ವತಿಯಿಂದ ಭಕ್ತರಿಗೆ ಮೊಸರನ್ನ ಹಾಗೂ ಬಿಸಿಬೇಳೆ ಬಾತ್ ವಿತರಣೆ ಮಾಡಲಾಗಿತ್ತು. ನಂತರ ಸೋಮವಾರ ಮುಂಜಾನೆ ಜಾತ್ರೆಯಲ್ಲಿ ಆಹಾರ ಸೇವಿಸಿದ ಸುಮಾರು 50ಕ್ಕೂ ಹೆಚ್ಚು ಭಕ್ತರಲ್ಲಿ ಹೊಟ್ಟೆ ನೋವು, ವಾಂತಿ ಕಾಣಿಸಿಕೊಂಡಿದೆ. ಇದರಿಂದ ಕೂಡಲೇ ಅಸ್ವಸ್ಥರನ್ನು ಅರಸೀಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೂಡ ನೀಡಲಾಗಿದೆ.

ಅದೃಷ್ಟವಶಾತ್‌ ತಕ್ಷಣವೇ ಚಿಕಿತ್ಸೆ ದೊರೆತಿದ್ದರಿಂದ ಅಸ್ವಸ್ಥರಾದವರ ಪೈಕಿ 20 ಮಂದಿ ಗುಣಮುಖರಾಗಿದ್ದು, 30ಕ್ಕೂ ಹೆಚ್ಚು ಜನರಿಗೆ ಚಿಕಿತ್ಸೆ ಮುಂದುವರೆದಿದೆ ಮತ್ತು ಈಗಾಗಲೇ ಭಕ್ತರಿಗೆ ನೀಡಿದ್ದ ಆಹಾರದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಾಲೂಕು ಆಡಳಿತ ತಿಳಿಸಿದೆ.

 

ವರದಿ:ರಂಜಿತ ರೇವಣ್ಣ ನಾಟನಹಳ್ಳಿ

- Advertisement -

Latest Posts

Don't Miss