2023 ರಲ್ಲಿ ದಕ್ಷಿಣ ಕನ್ನಡದ ಕಡಬದ ಬದ್ರಿಯಾ ಜುಮಾ ಮಸೀದಿ ಆವರಣದಲ್ಲಿ ‘ಜೈ ಶ್ರೀರಾಮ್’ ಘೋಷಣೆ ಕೂಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಅದನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ಸೆಪ್ಟೆಂಬರ್ ಎರಡನೇ ವಾರ ತಿರ್ಪು ನೀಡಿತ್ತು. ಅದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ಪರಿಶೀಲಿಸುವುದಾಗಿ ಒಪ್ಪಿದೆ. ಅಲ್ಲದೇ ಜೈ ಶ್ರೀರಾಮ್ ಘೋಷಣೆ ಕೂಗುವುದು ಹೇಗೆ ಅಪರಾಧ ಎಂದು ನ್ಯಾಯಪೀಠ ಪ್ರಶ್ನೆ ಮಾಡಿದೆ.
ಕರ್ನಾಟಕ ಹೈಕೋರ್ಟ್ ಸೆಪ್ಟಂಬರ್ 13ರಂದು ಜೈಶ್ರೀರಾಮ್ ಘೊಷಣೆ ಕೂಗಿದವರ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿತ್ತು. ಅದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ಪರಿಶೀಲಿಸಲು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಪಂಕಜ್ ಮಿಥಾಲ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ನ್ಯಾಯಪೀಠವು ಒಪ್ಪಿಗೆ ನೀಡಿತು. ಆದರೆ ದೂರುದಾರ ಅರ್ಜಿಗೆ ಸಂಬಂಧಿಸಿದಂತೆ ನೋಟಿಸ್ ನೀಡುವುದಿಲ್ಲ ಅಂತ ಹೇಳಿದೆ.
ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಾದ ಕೇವಲ 20 ದಿನಗಳಲ್ಲಿ ರಾಝ್ಯ ಹೈಕೋರ್ಟ್ ತನಿಖೆಗೆ ತಡೆ ನೀಡಿದೆ ಎಂದು ಹೇಳಿದ ನ್ಯಾಯಪೀಠ, ಮುಂದಿನ ವರ್ಷ 2025ರ ಜನವರಿಯಲ್ಲಿ ಅರ್ಜಿ ವಿಚಾರಣೆ ಮುಂದೂಡಿತು. ಇದಕ್ಕೆ ಆಕ್ಷೇಪಣಾ ಅರ್ಜಿ ಸಲ್ಲಿಸುವಂತೆ ಕರ್ನಾಟಕ ವಕೀಲರಿಗೆ ನ್ಯಾಯಾಲಯ ಸೂಚನೆ ನೀಡಿತು.
ಅರ್ಜಿ ಪರಿಶೀಲಿಸಿದ ನ್ಯಾಯಪೀಟವು, ಆರೋಪಿಗಳು ಧಾರ್ಮಿಕ ಪ್ರಾರ್ಥನೆ, ಜೈ ಶ್ರೀರಾಮ್ ಘೋಷಣೆ ಕೂಗಿದ್ದು ತಪ್ಪೆ ಎಂದು ಪ್ರಶ್ನೆ ಮಾಡಿತು. ಘೊಷಣೆ ಕೂಗಿದ್ದ ತಪ್ಪೆ? ಈ ಅಂಶವನ್ನು ಅಪರಾಧವಲ್ಲ ಎಂಬುದನ್ನು ಹೈಕೋರ್ಟ್ ತಿಳಿಸಿದೆ ಎಂದು ನ್ಯಾಯಪೀಠ ಹೇಳಿದೆ. ಇನ್ನೂ ದೂರಿನಲ್ಲಿ ಕಿಡಿಗೇಡಿಗಳು ಮಸಿದಿ ಆವರಣದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ. ಇದಕ್ಕೆ ಅನುಮತಿ ಇದೆಯೇ? ಇದು ಇತರರ ಧಾರ್ಮಿಕ ಭಾವನೆಗೆ ಕುಂದುಂಟು ಮಾಡುತ್ತದೆ ಎಂದು ಇಬ್ಬರು ವಿರುದ್ಧ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸೆಕ್ಷನ್ 153 ಎ ಅಡಿ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.
ದೂರುದಾರರು ಯಾರು ಮತ್ತು ಆರೋಪಿಗಳು ಇವರೇ ಎಂದು ಗುರುತಿಸಿದ್ದು ಹೇಗೆ ಎಂದು ನ್ಯಾಯಪೀಠ ವಿಚಾರಣೆ ವೇಳೆ ಪ್ರಶ್ನಿಸಿತು. ಆರೋಪಿಗಳು ಸಿಸಿಟಿವಿಯಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ತಿಳಿಸಲಾಗಿದೆ. ಸಿಸಿಟಿವಿ ಸುತ್ತಮುತ್ತ ಇವರೇ ಕಂಡು ಬಂದಿದ್ದಾರೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಸಿಸಿಟಿವಿಯಲ್ಲಿ ಕಂಡು ಬಂದ ಕಾರಣಕ್ಕೆ ಇವರೇ ಘೋಷಣೆ ಕೂಗಿದವರು ಎಂದು ನಿರ್ಣಯಕ್ಕೆ ಬರಲು ಸಾಧ್ಯವೇ ಎಂದು ಪೀಠ ಪ್ರಶ್ನಿಸಿ, ಅರ್ಜಿ ವಿಚಾರಣೆಯನ್ನು ಮುಂದೂಡಿತು.