Karma Hit back ಎಂದರೇ ಇದೇ ಅಲ್ಲವೇ ಸಿದ್ದರಾಮಯ್ಯನವರೇ?: ಹೆಚ್.ಡಿ.ಕುಮಾರಸ್ವಾಮಿ

political News: ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಸಿಬಿಐ ತನಿಖೆಗೆ ಕೊಟ್ಟಿದ್ದ ಮುಕ್ತ ಅವಕಾಶವನ್ನು ಹಿಂಪಡೆದಿದ್ದು, ಈ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಶ್ರೀಮಾನ್ ಸಿದ್ದರಾಮಯ್ಯನವರೇ.. ನಿಮ್ಮ ‘ಸಿದ್ವಿಲಾಸ’ಕ್ಕೆ ಉಘೇಉಘೇ ಎನ್ನಲೇಬೇಕು. ಅಂದು: ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೇ ಸಮಾಧಿ ಕಟ್ಟಿ ಎಸಿಬಿ ರಚನೆ ಮಾಡಿಕೊಂಡಿರಿ! ಇಂದು: ಮೂಡಾಗರಣದಿಂದ ಬಚಾವಾಗಲು ನಿಮಗೀಗ ಅದೇ ಲೋಕಾಯುಕ್ತವೇsss ಗತಿ!!

Karma Hit back ಎಂದರೇ ಇದೇ ಅಲ್ಲವೇ ಸಿದ್ದರಾಮಯ್ಯನವರೇ? ನಿಮ್ಮ ಗ್ರಹಚಾರಕ್ಕೆ ಎಸಿಬಿಯನ್ನೂ ಹೈಕೋರ್ಟ್ ಬರ್ಖಾಸ್ತು ಮಾಡಿಬಿಟ್ಟಿತು. ಈಗ ಲೋಕಾಯುಕ್ತವನ್ನೇ ಗುರಾಣಿ ಮಾಡಿಕೊಂಡು ಸಿಬಿಐ ರಾಜ್ಯ ಪ್ರವೇಶಕ್ಕೆ ಸಂಪುಟದಿಂದ ಬಾಗಿಲು ಬಂದ್ ಮಾಡಿಸಿದ್ದೀರಿ. ಅಲ್ಲಿಗೆ ಆರೋಪಿ ಅಪರಾಧಿಯಾದ ಎಂದೇ ಲೆಕ್ಕ. ‘ ಸಿದ್ದಾಪರಾದ’ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ. ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು.. ನಿಮಗೂ ಭಯವಿದೆsss!! ಅದೇ ಈ ನೆಲದ ಕಾನೂನಿನ ಶಕ್ತಿ. ಏನಂತೀರಿ? ಎಂದು ಪ್ರಶ್ನಿಸಿದ್ದಾರೆ.

About The Author