Sunday, October 5, 2025

Latest Posts

ಜಾತಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಈಶ್ವರ್ ಖಂಡ್ರೆ ಕರೆ

- Advertisement -

ಜಾತಿಗಣತಿ ಸಮೀಕ್ಷೆಯಲ್ಲಿ ಪ್ರತಿಯೊಬ್ಬರು ಸಕ್ರಿಯವಾಗಿ ಪಾಲ್ಗೊಳ್ಳಿ. ಹೀಂಗತ ಸಚಿವ ಈಶ್ವರ್ ಖಂಡ್ರೆ ಕರೆ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಿಂದ ಸುದ್ದಿಗೋಷ್ಠಿ ನಡೆಸಲಾಯ್ತು. ಈ ವೇಳೆ
ಮಹಾಪ್ರಧಾನ ಕಾರ್ಯದರ್ಶಿ ಆಗಿರುವ ಈಶ್ವರ್ ಖಂಡ್ರೆ ಭಾಗಿಯಾಗಿದ್ರು.

ಮೀಸಲಾತಿಗಾಗಿ ನೀಡುವ ಜಾತಿ ಪ್ರಮಾಣ ಪತ್ರಕ್ಕೂ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಬರೆಸುವ ಮಾಹಿತಿಗೂ ಸಂಬಂಧ ಇರುವುದಿಲ್ಲ. ನೈಜ ಜಾತಿಯನ್ನು ಶಾಲಾ ದಾಖಲಾತಿ ಸೇರಿದತೆ, ಇನ್ನಿತರೇ ದಾಖಲಾತಿಗಳನ್ನು ಪರಾಮರ್ಶಿಸಿದ ಬಳಿಕವಷ್ಟೇ, ಜಾತಿ ಪ್ರಮಾಣ ಪತ್ರ ನೀಡಲಾಗುತ್ತದೆ. ಹೀಗಾಗಿ ಪ್ರತಿಯೊಬ್ಬರೂ ತಮ್ಮ ನೈಜ ಜಾತಿಯನ್ನೇ ಸಮೀಕ್ಷೆಯಲ್ಲಿ ಬರೆಸಬೇಕು. ನಮ್ಮ ಸಮುದಾಯದ ನೈಜ ಸಂಖ್ಯೆ ಹೊರಹೊಮ್ಮಲು ಸಹಕರಿಸಬೇಕು.

ಅನುಸೂಚಿಯ ಧರ್ಮದ ಕಾಲಂನಲ್ಲಿ, ಇತರೆ ಎಂದು ನೀಡಿರುವ ಕಾಲಂನಲ್ಲಿ ವೀರಶೈವ ಲಿಂಗಾಯತ ಎಂದು ಮತ್ತು ಜಾತಿ ಕಾಲಂನಲ್ಲಿ ಲಿಂಗಾಯತ ಅಥವಾ ವೀರಶೈವ ಅಥವಾ ವೀರಶೈವ ಲಿಂಗಾಯತ ಎಂದು ಮತ್ತು ಉಪಜಾತಿ ಕಾಲಂನಲ್ಲಿ ತಾವು ಸೇರಿದ ಉಪಜಾತಿಯ ಸಂಕೇತ ಸಂಖ್ಯೆಯನ್ನು ಖಚಿತಪಡಿಸಿಕೊಂಡು ಬರೆಸಿ ಅಂತಾ ಈಶ್ವರ್‌ ಖಂಡ್ರೆ ಮನವಿ ಮಾಡಿದ್ರು.

ಇನ್ನು, ಸುದ್ದಿಗೋಷ್ಠಿಯಲ್ಲಿ ಮಹಾಸಭೆಯ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರಾದ ಶ್ರೀ ಶಂಕರ ಬಿದರಿ, ಕಾರ್ಯದರ್ಶಿ ಹೆಚ್.ಎಂ.ರೇಣುಕ ಪ್ರಸನ್ನ, ಉಪಾಧ್ಯಕ್ಷರಾದ ಬಿ.ಎಸ್. ಸಚ್ಚಿದಾನಂದಮೂರ್ತಿ, ರಾಷ್ಟ್ರೀಯ ಮಹಿಳಾ ಅಧ್ಯಕ್ಷರಾದ ಶ್ರೀಮತಿ ವೀಣಾ ಕಾಶಪ್ಪನವರ ಸೇರಿ, ಹಲವು ನಾಯಕರು, ಮುಖಂಡರು ಭಾಗಿಯಾಗಿದ್ರು.

- Advertisement -

Latest Posts

Don't Miss