ಪಾಪ್ಯುಲರ್ಟಿ ಇದ್ದ ರಾಜ್ಯ ಸರ್ಕಾರ ಎರಡು ಸಾವಿರ ಕೊಡ್ತಿದೆ ನಾಚಿಕೆ ಆಗುವುದಿಲ್ಲವೇ..?: ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ರಾಜ್ಯದ ಬರದ ಬಗ್ಗೆ ಸುಪ್ರೀಂ ಕೋರ್ಟ್ ನಿಂದ ಎಲ್ಲವೂ ಕೂಡ ಗೊತ್ತಾಗುತ್ತದೆ. ಬಿಜೆಪಿ ವಿರುದ್ಧ ವಿನಾಕಾರಣ ಆರೋಪ ಮಾಡುವ ರಾಜ್ಯ ಕಾಂಗ್ರೆಸ್ ಸರ್ಕಾರ ಇಷ್ಟು ಜನಪ್ರಿಯತೇ ಇದ್ದರೇ ದುಡ್ಡು ಕೊಡಬಹುದಿತ್ತು. ಕೇವಲ ಎರಡು ಸಾವಿರ ಕೊಡ್ತಿದ್ದೀರಿ ನಿಮಗೆ ನಾಚಿಕೆ ಆಗುವುದಿಲ್ಲವೇ ಎಂದು ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದರು.

ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಗ್ಯಾರಂಟಿ ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡದೇ ದೊಡ್ಡಮಟ್ಟದಲ್ಲಿ ಸಾಲ ಮಾಡಿದೆ. ಬರ ಸಮೀಕ್ಷೆಯ ಬಗ್ಗೆ ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಎಲ್ಲವೂ ಗೊತ್ತಾಗುತ್ತದೆ. ಪಾಪ್ಯುಲರ್ಟಿ ಇದ್ದ ರಾಜ್ಯ ಸರ್ಕಾರ ಎರಡು ಸಾವಿರ ಕೊಡ್ತಿದೆ ನಾಚಿಕೆ ಆಗುವುದಿಲ್ಲವೇ..? ಯಡಿಯೂರಪ್ಪ ಸಿಎಂ ಇದ್ದ ಸಂದರ್ಭದಲ್ಲಿ ಬರ ಹಾವಳಿಯಿದ್ದಾಗ ಸಾಕಷ್ಟು ಹಣವನ್ನು ಕೊಟ್ಟಿದ್ದೇವೆ ಎಂದರು.

ಎಷ್ಟೇ ತೆರಿಗೆ ಜಾಸ್ತಿ ಮಾಡಿದರೂ ರಾಜ್ಯ ಸರ್ಕಾರದ ಆದಾಯ ಮಾತ್ರ ಜಾಸ್ತಿಯಾಗುತ್ತಿಲ್ಲ. ಮುದ್ರಾಂಕ ಶುಲ್ಕದಿಂದಲೂ ಕೂಡ ಯಾವುದೇ ರೀತಿಯಲ್ಲಿ ಆದಾಯ ಸ್ಥಿತಿ ಸರಿದೂಗುತ್ತಿಲ್ಲ. ಅಲ್ಲದೆ ದೊಡ್ಡ ಮಟ್ಟದ ಭ್ರಷ್ಟಾಚಾರದಿಂದ ಆರ್ಥಿಕ ಸ್ಥಿತಿ ಅದೋಗತಿಗೆ ತಲುಪಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಸಿಲಿನ ತಾಪಮಾನ ನಿಜಕ್ಕೂ ಸಾಕಷ್ಟು ಏರಿಕೆಯಾಗಿದೆ. ಇದರಿಂದ ಎಲ್ಲೊ ಒಂದು ಕಡೆಯಲ್ಲಿ ಪ್ರಚಾರಕ್ಕೂ ಕೂಡ ಎಫೆಕ್ಟ್ ಆಗಿದೆ. ರೈತ ಸಮುದಾಯದ ಕಾರ್ಯಕರ್ತರು ಹೆಚ್ಚಾಗಿರುವುದರಿಂದ ಏಪ್ರಿಲ್ ವೇಳೆಯಲ್ಲಿ ಮಧ್ಯಾಹ್ನದ ಸಮಯದಲ್ಲಿ ಪ್ರಚಾರಕ್ಕೆ ಹೋಗುವದನ್ನು ನಾವೇ ಸ್ವಲ್ಪ ಕಡಿಮೆ ಮಾಡಿದ್ದೇವೆ ಎಂದು ಅವರು ಹೇಳಿದರು.

ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆಯ ಬಗ್ಗೆ ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಅವರು, ಶ್ರೀಗಳು ಏನೇ ಮಾಡಿದರೂ ನಮಗೆ ಆಶೀರ್ವಾದ. ಈ ಬಗ್ಗೆ ನಾನು ಏನು ಮಾತನಾಡುವುದಿಲ್ಲ ಎಂದ ಅವರು, ದಿಂಗಾಲೇಶ್ವರರ ವಿರುದ್ಧ ಸೊಶೀಯಲ್ ಮೀಡಿಯಾ ವಾರ್ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಸೊಶೀಯಲ್ ಮೀಡಿಯಾ ಓಪನ್ ಪ್ಲಾಟ್ ಫಾರಂ ಆಗಿದೆ. ಈ ನಿಟ್ಟಿನಲ್ಲಿ ಜನರು ತಮಗೆ ಏನು ಅನಿಸಿದೆಯೋ ಅದನ್ನು ಹಾಕಿದ್ದಾರೆ. ಈ ಬಗ್ಗೆ ನೋ ಕಾಮೆಂಟ್ ಎಂದರು.

ಯತ್ನಾಳ್ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ: ಗುಂಡೂರಾವ್ ಪತ್ನಿ ತಬ್ಬು

ಲೋಕಸಭೆ ಚುನಾವಣೆ 2024: ಧಾರವಾಡ ಲೋಕಸಭಾ ಕ್ಷೇತ್ರದಿಂದ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ

ಕನ್ನಡ ಮಾಧ್ಯಮ ಲೋಕದಲ್ಲಿ ಹೊಸ ಸಂಚಲನ.. “ಗ್ಯಾರಂಟಿ ನ್ಯೂಸ್”..!

About The Author