National News: ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನವು ತನ್ನ ಮೂರನೇ ದಂಡಯಾತ್ರೆಯಲ್ಲಿ ಚಂದ್ರನ ಕಡೆಗೆ ಹಾರಲು ಸಿದ್ಧವಾಗಿದೆ. ಈ ಮಧ್ಯೆ ಚಂದ್ರಯಾನ-3 ಉಪಗ್ರಹ ನೌಕೆಯ ಮಾದರಿ ಜೊತೆ ಇಸ್ರೋ ವಿಜ್ಞಾನಿಗಳು ಹಾಗೂ ಸಿಬ್ಬಂದಿಗಳ ತಂಡ ತಿರುಪತಿ ತಿಮ್ಮಪ್ಪನ ಸನ್ನಿಧಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿವೆ.
ತಿರುಪತಿಯಲ್ಲಿರುವ ತಿಮ್ಮಪ್ಪನ ದೇಗುಲಕ್ಕೆ ಆಗಮಿಸಿದ ಇಸ್ರೋ ವಿಜ್ಞಾನಿಗಳ ತಂಡ ಮಿನಿಯೇಚರ್ ಮಾಡೆಲ್ ಜೊತೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದರು. ಶುಕ್ರವಾರ ಮಧ್ಯಾಹ್ನ 2 ಗಂಟೆ 35 ನಿಮಿಷ 17 ಸೆಕೆಂಡ್‌ಗೆ ಚಂದ್ರಯಾನ ನೌಕೆಯನ್ನು ಹೊತ್ತ ರಾಕೆಟ್ ಶ್ರೀಹರಿಕೋಟಾದಿಂದ ಉಡಾವಣೆಗೊಳ್ಳಲಿದೆ. ಈ ಉಡಾವಣೆಗೆ ದೇಶೀಯವಾಗಿ ನಿರ್ಮಾಣ ಮಾಡಲಾದ ಲಾಂಚಿಂಗ್ ವಾಹನ ಬಳಸಲಾಗುತ್ತಿದ್ದು, ಲ್ಯಾಂಡರ್ ಮತ್ತು ರೋವರ್‌ಗಳನ್ನು ಸಹ ದೇಶೀಯವಾಗಿ ತಯಾರಿಸಲಾಗಿದೆ. ಲ್ಯಾಂಡರ್ ಆಗಸ್ಟ್‌ನಲ್ಲಿ ಚಂದ್ರನ ಮೇಲೆ ಇಳಿಯಲಿದೆ. ಇದು ಚಂದ್ರಯಾನ-2 ಯೋಜನೆಯ ಮುಂದುವರೆದ ಭಾಗವಾದ ಕಾರಣ ಈ ಯೋಜನೆಯ ಆರ್ಬಿಟರನ್ನು ಕೈಬಿಡಲಾಗಿದೆ.