Monday, April 14, 2025

Latest Posts

ನಮ್ಮ ಸರ್ಕಾರ ಐದಕ್ಕೆ ಐದೂ ವರ್ಷ ಪೂರೈಸುವುದು ಶತಸಿದ್ದ: ಶಿಗ್ಗಾವಿಯಲ್ಲಿ ಸಿಎಂ ಭರ್ಜರಿ ಕ್ಯಾಂಪೇನ್

- Advertisement -

Shiggavi News: ಇಂದು ಹಾವೇರಿಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಉಪಚುನಾವಣೆಗೆ ಸ್ಪರ್ಧಿಸುತ್ತಿರುವ ಶಿಗ್ಗಾವಿಯ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಿದರು.

ಈ ವೇಳೆ ಮಾತನಾಡಿದ ಸಿಎಂ, ಇದು ಕೇವಲ ಉಪಚುನಾವಣೆಯಲ್ಲ. ನನಗೆ, ನನ್ನ ಸರ್ಕಾರಕ್ಕೆ ಹೆಚ್ಚಿನ ಶಕ್ತಿ ನೀಡುವ ಮಹತ್ವದ ಚುನಾವಣೆ. ಆದ್ದರಿಂದ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರನ್ನು ಗೆಲ್ಲಿಸಿ ನನಗೆ ಶಕ್ತಿ ನೀಡಿ. ನಾವು ನುಡಿದಂತೆ ನಡೆದಿದ್ದೇವೆ. ಸರ್ಕಾರ ಬಂದ 8 ತಿಂಗಳಲ್ಲೇ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ಇಡೀ ರಾಜ್ಯದ ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡುತ್ತಿದ್ದೇವೆ. ಇದಕ್ಕಾಗಿ ಗ್ಯಾರಂಟಿ ಯೋಜನೆಗಳಿಗಾಗಿ 56 ಸಾವಿರ ಕೋಟಿ ರೂಪಾಯಿಯನ್ನು ನೇರವಾಗಿ ರಾಜ್ಯದ ಜನರಿಗೆ ತಲುಪಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬಸವರಾಜ ಬೊಮ್ಮಾಯಿ ಅವರು ಕೃಷಿ ಸಚಿವರಾಗಿ, ಗೃಹ ಸಚಿವರಾಗಿ, ಮುಖ್ಯಮಂತ್ರಿಯಾಗಿ ಕ್ಷೇತ್ರಕ್ಕೆ ಏನು ನೀಡಿದ್ದಾರೆ? ಕ್ಷೇತ್ರಕ್ಕೆ ಏನೂ ಕೆಲಸ ಮಾಡದ ಬೊಮ್ಮಾಯಿ ಅವರ ಪುತ್ರನಿಗೆ ಮತ ಹಾಕುವುದರಲ್ಲಿ ಅರ್ಥವೇ ಇಲ್ಲ. 40 ವರ್ಷದಲ್ಲಿ ಸಣ್ಣ ಕಪ್ಪು ಚುಕ್ಕೆ ಕೂಡ ಇಲ್ಲದ ನನ್ನನ್ನು ಕೇವಲ ಷಡ್ಯಂತ್ರದಿಂದ ಕೆಳಗಿಳಿಸಲು ಪಿತೂರಿ ಮಾಡುತ್ತಿದ್ದಾರೆ. ಇದಕ್ಕೆ ನೀವು ಅವಕಾಶ ನೀಡ್ತೀರಾ? ಬಿಜೆಪಿ ಷಡ್ಯಂತ್ರ ಸೋಲಿಸಬೇಕೆಂದರೆ ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡ್ತಾರೆಂದು ವಿಜಯೇಂದ್ರ, ಆರ್.ಅಶೋಕ, ಯತ್ನಾಳ್ ಎಲ್ಲರೂ ಬೊಬ್ಬೆ ಹೊಡೆಯುತ್ತಿದ್ದಾರೆ. ರಾಜ್ಯದ ಜನರ ನೈತಿಕ‌ ಶಕ್ತಿ ನನ್ನ ಜೊತೆಗೆ ಇರುವವರೆಗೂ ನಾನು ಬಿಜೆಪಿ ಪರಿವಾರದ ಷಡ್ಯಂತ್ರಕ್ಕೆ ಹೆದರುವ, ಬೆದರುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರ ಐದಕ್ಕೆ ಐದೂ ವರ್ಷ ಪೂರೈಸುವುದು ಶತಸಿದ್ದ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಕ್ಫ್ ಆಸ್ತಿ ಸರ್ಕಾರದ ಆಸ್ತಿ ಅಲ್ಲ. ಅದು ವಕ್ಫ್ ಬೋರ್ಡ್ ಗೆ ಸೇರಿದ ಆಸ್ತಿ. ಈ ಆಸ್ತಿ ಒತ್ತುವರಿ ಮಾಡಿದವರನ್ನು ತೆರವುಗೊಳಿಸಲು ಯಡಿಯೂರಪ್ಪ, ಬೊಮ್ಮಾಯಿ, ಕುಮಾರಸ್ವಾಮಿ ಅವಧಿಯಲ್ಲೂ ನೋಟಿಸ್ ನೀಡಿದ್ದಾರೆ, ಒತ್ತುವರಿ ತೆರವುಗೊಳಿಸಿದ್ದಾರೆ. ಆದರೆ ನಮ್ಮ‌ ಸರ್ಕಾರದಿಂದ ಯಾವುದೇ ರೈತರಿಗೂ ತೊಂದರೆ ಆಗುವುದಿಲ್ಲ. ನೋಟಿಸ್ ವಾಪಾಸ್ ಪಡೆಯಲು ಸ್ಪಷ್ಟ ನಿರ್ದೇಶನ ನೀಡಿದ್ದೇನೆ. ಅಜ್ಜಂಪೀರ್ ಖಾದ್ರಿ ಅವರಿಗೆ ಒಳ್ಳೆ ಸ್ಥಾನ ಕೊಡುತ್ತೇವೆ. ಶಿಗ್ಗಾಂವ್ ನಲ್ಲಿ ಪಠಾಣ್ ಅವರನ್ನು ಗೆಲ್ಲಿಸಿ ನನಗೆ ಶಕ್ತಿ ನೀಡಿ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

- Advertisement -

Latest Posts

Don't Miss