Monday, July 22, 2024

Latest Posts

ಯಾರನ್ನು ಓಲೈಸಲು ಈ ರೀತಿ ಮಾಡುತ್ತಿದ್ದಾರೆಂಬ ಗುಟ್ಟು ರಟ್ಟಾಗಿದೆ: ನಿಖಿಲ್ ಕುಮಾರ್ ಆಕ್ರೋಶ

- Advertisement -

Political News: ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಹೆಸರಿಡಲು ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಸಿದ್ದರಾಮಯ್ಯಗೆ ಮನವಿ ಪತ್ರ ನೀಡಿದ್ದು, ರಾಮನಗರ ಜಿಲ್ಲೆಯ ಹೆಸರು ಸದ್ಯದಲ್ಲೇ ಬದಲಾಗುವ ಎಲ್ಲ ಸಾಧ್ಯತೆಗಳೂ ಇದೆ.

ಈ ಕಾರಣಕ್ಕೆ ಜೆಡಿಎಸ್ ನಾಯಕ ನಿಖಿಲ್ ಕುಮಾರ್, ಕಿಡಿಕಾರಿದ್ದು, ಟ್ವೀಟ್ ಮಾಡಿದ್ದಾರೆ. ಪುರಾಣ ಪ್ರಸಿದ್ಧವಾದ ರಾಮನಗರ ಹೆಸರನ್ನು ಕಿತ್ತುಹಾಕಿ, ಅದನ್ನು ಬೆಂಗಳೂರು ದಕ್ಷಿಣ ಎಂದು ಮಾಡುವುದರಲ್ಲಿ ಯಾವ ಹಿಡೆನ್ ಅಜೆಂಡಾ ಅಡಗಿದೆಯೋ ಗೊತ್ತಿಲ್ಲ. ಆದರೆ, ಯಾರನ್ನು ಓಲೈಸಲು ರಾಮನಗರ ಹೆಸರಿಗೆ ಗೇಟ್ ಪಾಸ್ ನೀಡಲಾಗುತ್ತಿದೆ ಎನ್ನುವ ಒಳಗುಟ್ಟು ಮಾತ್ರ ರಟ್ಟಾಗಿದೆ.

ರಿಯಲ್ ಎಸ್ಟೇಟ್ ದಂಧೆಕೋರರಿಗೆ ಜಿಲ್ಲೆಯನ್ನು ಸ್ವರ್ಗವನ್ನಾಗಿ ಮಾಡುವುದು ಈ ಷಡ್ಯಂತ್ರ್ಯದ ಕರಾಳಮುಖ. ಕೆಲವರ ತುಷ್ಟೀಕರಣ ಮತ್ತೊಂದು ಮುಖ. ರಾಜಕೀಯವಾಗಿ ಬಹಳ ಎತ್ತರದ ಸ್ಥಾನದಲ್ಲಿರುವ ರಾಮನಗರ ಜಿಲ್ಲೆಯ ಹೆಗ್ಗುರುತನ್ನೇ ಸರ್ವನಾಶ ಮಾಡುವ ಹುನ್ನಾರ ನಡೆದಿದೆ.

ವಿಧಾನಸೌಧದ ಶಿಲ್ಪಿ ಶ್ರೀ ಕೆಂಗಲ್ ಹನುಮಂತಯ್ಯನವರು, ಈ ದೇಶದ ಪ್ರಧಾನಿಗಳಾಗಿದ್ದ ಶ್ರೀ ಹೆಚ್.ಡಿ.ದೇವೇಗೌಡರು, ಎರಡು ಬಾರಿ ರಾಜ್ಯ ಮುಖ್ಯಮಂತ್ರಿಗಳಾಗಿದ್ದ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರು ರಾಮನಗರ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದರು. ಜಿಲ್ಲೆಯ ಹೆಸರು ಬದಲಿಸಲು ಹೊರಟವರು ಮೊದಲು ಈ ಇತಿಹಾಸ ಅರಿತರೆ ಒಳ್ಳೆಯದು. #ನಮ್ಮರಾಮನಗರ_ನಮ್ಮ ಹೆಮ್ಮೆ ಎಂದು ನಿಖಿಲ್ ಕುಮಾರ ಟ್ವೀಟ್ ಮಾಡಿದ್ದಾರೆ. 

- Advertisement -

Latest Posts

Don't Miss