Hubballi News: ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಜಾರಿ ಮಾಡಿದೆ. ಆದರೆ ಕೇಂದ್ರ ಸರ್ಕಾರ ನೀಡುವ ಐದು ಕೆಜಿ ಅಕ್ಕಿಯಲ್ಲಿಯೇ ತಮ್ಮ ರಾಜಕೀಯ ಬೇಳೆಯನ್ನು ಬೇಯಿಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಐದು ಕೆಜಿ ಅಕ್ಕಿ ಕೊಡುವ ಬದಲಿಗೆ ಅರ್ಹ ಪಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡುವ ಕಾರ್ಯ ಮಾಡಬೇಕು ಅಂದಾಗ ಜನರಿಗೆ ಯಾರು ಎಷ್ಟು ಅಕ್ಕಿ ಕೊಡುತ್ತಾರೆ ಗೊತ್ತಾಗುತ್ತದೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು.
ನಗರದಲ್ಲಿಂದು ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಒಬ್ಬರಿಗೆ ತಿಂಗಳಿಗೆ ಹತ್ತು ಕೆಜಿ ಅಕ್ಕಿ ಹೆಚ್ಚಾಗುತ್ತದೆ. ಜನರು ಕೇವಲ ಅಕ್ಕಿಯನ್ನು ಮಾತ್ರ ತಿನ್ನುವುದಿಲ್ಲ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನೀಡುವ ಐದು ಕೆಜಿ ಅಕ್ಕಿಯ ಹಣವನ್ನು ಪಲಾನುಭವಿಗಳ ಖಾತೆಗೆ ಜಮಾ ಮಾಡಿದರೇ ಅವರು ದೈನಂದಿನ ಜೀವನಕ್ಕೆ ಬೇಕಾದ ಜೋಳ,ರಾಗಿಗಳಂತ ಧಾನ್ಯ ಖರೀದಿಸುತ್ತಾರೆ. ಆಗ ಜನರಿಗೆ Congress ಗ್ಯಾರಂಟಿ ಬಗ್ಗೆ ಅರಿವಾಗುತ್ತದೆ ಎಂದರು.
ಇನ್ನೂ ಈ ಬಗ್ಗೆ ನಾನು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುತ್ತೇನೆ ಕಾಂಗ್ರೆಸ್ ಸರ್ಕಾರದ ಬಣ್ಣವನ್ನು ಬಯಲು ಮಾಡುವ ದೃಷ್ಟಿಯಿಂದ ಹಾಗೂ ಜನರ ಹಿತದೃಷ್ಟಿಯಿಂದ ಇಂತಹದೊಂದು ನಿರ್ಧಾರಕ್ಕೆ ಬರಬೇಕು ಎಂದು Aravind Bellad ಮನವಿ ಮಾಡಿದರು.
World Milk Day: ಕನಕಪುರದ ಕ್ಷೀರ ಕ್ರಾಂತಿಯ ಝಲಕ್ ತೋರಿಸಿದ ಡಿಕೆಶಿ..
ಸಿಎಂ ಸಿದ್ದರಾಮಯ್ಯ ಘೋಷಿಸಿದ 5 ಗ್ಯಾರಂಟಿಗಳು ಯಾವುದು..? ಅದರ ನಿಯಮಗಳೇನು..?
‘ಅಹಂಕಾರದ ಪರಮಾವಧಿ! ಕಾಂಗ್ರೆಸ್ ಸರಕಾರಕ್ಕೆ ಕೇಸರಿ ಎಂದರೆ ದ್ವೇಷ, ಶತ್ರುಭಾವ!’