Saturday, April 19, 2025

Latest Posts

ಶಕ್ತಿಕೇಂದ್ರ ವಿಧಾನಸೌಧದಲ್ಲಿ ಇಂಥ ಘಟನೆ ನಡೆದಿದ್ದು ಖಂಡನೀಯ: ಜಗದೀಶ್ ಶೆಟ್ಟರ್

- Advertisement -

Hubli News: ಹುಬ್ಬಳ್ಳಿ: ವಿಧಾನಸೌಧ ರಾಜ್ಯದ ಶಕ್ತಿಕೇಂದ್ರ, ರಾಜ್ಯಸಭಾ ಸದಸ್ಯರು ಇರುವ ವೇಳೆ ದೇಶದ್ರೋಹ ಕೆಲಸ ಆಗಿದೆ. ಇದನ್ನು ನಾನು ಖಂಡಿಸುತ್ತೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ.

ನಗರದಲ್ಲಿಂದು ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳವಾರ ರಾಜ್ಯಸಭಾ ಫಲಿತಾಂಶ ಬಂದಿದೆ. ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಈ ವೇಳೆ ಪಾಕಿಸ್ತಾನ ಪರವಾಗಿ ಘೋಷಣೆ ಕೂಗಲಾಗಿದೆ. ಇದು ಖಂಡನೀಯ. ಈ ಬಗ್ಗೆ ಸ್ಪಷ್ಟಿಕರಣ ಕೇಳಿದರೂ ಪಾಕಿಸ್ತಾನ ಪರವಾದ ಘೋಷಣೆ ಕೇಳಿಯೇ ಇಲ್ಲ ಎಂದು ಹೇಳುತ್ತಾರೆ. ಮಾಧ್ಯಮದವರ ಮೇಲೆ ಕಿಡಿಕಾರುವ ಮನಸ್ಥಿತಿ ಬದಲಾಗಬೇಕಿದೆ ಎಂದರು.

ಪಾಕಿಸ್ತಾನದಲ್ಲಿ ಆರ್ಥಿಕ ಸ್ಥಿತಿ ಹದಗೆಟ್ಟು ಹೋಗಿದೆ. ಅಲ್ಲಿನ ಜನರೇ ಪ್ರಧಾನಿ ನರೇಂದ್ರ ಮೋದಿ ತಮ್ಮ ನಾಯಕರು ಆಗಬೇಕೆಂದು ಹೇಳುತ್ತಿದ್ದಾರೆ. ವಿಧಾನಸೌಧದಲ್ಲಿ ನಡೆದ ಘಟನೆಯನ್ನು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ಖಂಡಿಸಬೇಕು. ಘೋಷಣೆಯ ವಿಡಿಯೋ ರೆಕಾರ್ಡ್ ಆಗಿದೆ. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು, ಇಲ್ಲವಾದರೆ ಕಾನೂನು ಸುವ್ಯವಸ್ಥೆ ಹಾಳಾಗುತ್ತದೆ ಎಂದು ಹರಿಹಾಯ್ದರು.

ದೇಶದ್ರೋಹಿಗಳಿಗೆ ವಿಧಾನಸಭೆಯಲ್ಲಿ ಜಾಗ ಕೊಟ್ಟಿರುವುದು ಆತಂಕಕಾರಿ ಬೆಳವಣಿಗೆ: ಬಸವರಾಜ್ ಬೊಮ್ಮಾಯಿ

ರಾಜ್ಯದ ರಕ್ಷಣೆಗಾಗಿ ಕಾಂಗ್ರೆಸ್ಸಿಗರೇ ವಿಧಾನಸೌಧ ಬಿಟ್ಟು ತೊಲಗಿ: ಬಿಜೆಪಿ ನಾಯಕರ ಆಕ್ರೋಶ

ಪಾಕ್‌ ಪರ ಘೋಷಣೆ ಕೂಗಿದವರನ್ನು ಒದ್ದು ಒಳಗೆ ಹಾಕಿ -ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಗ್ರಹ

- Advertisement -

Latest Posts

Don't Miss