Hubballi News: ಹುಬ್ಬಳ್ಳಿ : ಕ್ರೀಡೆಯು ಜೀವನದ ಬಹುಮುಖ್ಯ ಘಟಕ. ಎಲ್ಲರೂ ಕ್ರೀಡಾ ಮನೋಭಾವನೆ ಬೆಳೆಸಿಕೊಳ್ಳವುದು ಅತ್ಯವಶ್ಯಕವಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ. ಈಶ್ವರ ಉಳ್ಳಾಗಡ್ಡಿ ಹೇಳಿದರು.
ಇಂದು ಗೋಕುಲ ರಸ್ತೆಯ ಹೊಸ ಸಶಸ್ತ್ರ ಮೀಸಲು ಪಡೆಯ ಕವಾಯತು ಮೈದಾನದಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತಾಲಯ ಘಟಕದ ವತಿಯಿಂದ ಆಯೋಜಿಸಿದ್ದ ಪೊಲೀಸ್ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು.
ಇಂತಹ ಕ್ರೀಡಾ ಚಟುವಟಿಕೆಗಳು ಮುಂದಿನ ಪೀಳಿಗೆಗೆ ಸ್ಪೂರ್ತಿದಾಯಕವಾಗಲಿ. ಕ್ರೀಡಾಕೂಟದಲ್ಲಿ ಭಾಗವಹಿಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳು ಎಂದು ನುಡಿದರು.
ಹುಬ್ಬಳ್ಳಿ ಧಾರವಾಡ ಪೋಲೀಸ್ ಆಯುಕ್ತರಾದ ರೇಣುಕಾ ಸುಕುಮಾರ ಸ್ವಾಗತಿಸಿ ಮಾತನಾಡಿ, ಒತ್ತಡದ ಬದುಕಿನಲ್ಲಿ ಮನುಷ್ಯ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢವಾಗಿರಲು ಇಂತಹ ಕ್ರೀಡಾ ಚಟುವಟಿಕೆಗಳು ಅವಶ್ಯಕವಾಗಿವೆ. ಆ ನಿಟ್ಟಿನಲ್ಲಿ ಕಳೆದ 3 ದಿನಗಳಿಂದ ಪೋಲೀಸ್ ಕ್ರೀಡಾಕೂಟಗಳನ್ನು ಆಯೋಜಿಸಲಾಗಿದೆ. ಪೋಲೀಸ್ ಕ್ರೀಡಾಕೂಟದ ಯಶಸ್ಸಿಗೆ ಕೈಜೊಡಿಸಿದ ಪೋಲೀಸ್ ಇಲಾಖೆಯ ಎಲ್ಲ ಸಿಬ್ಬಂದಿ ವರ್ಗದವರಿಗೆ ಅಭಿನಂದನೆಗಳು ಎಂದರು.
ವೆಂಕಟೇಶ ನಾಯ್ಕ ಹಾಗೂ ರುಕ್ಮಿಣಿ ಅವರು ಪುರುಷರ ಹಾಗೂ ಮಹಿಳೆಯರ ವೈಯಕ್ತಿಕ ವೀರಾಗ್ರಣಿ ಪ್ರಶಸ್ತಿ ಪಡೆದುಕೊಂಡರು. ಸಿಎಆರ್ ಹುಬ್ಬಳ್ಳಿ ಧಾರವಾಡ ತಂಡ ಟೀಮ್ ಚಾಂಪಿಯನ್ ಶಿಪ್ ಪ್ರಶಸ್ತಿಯನ್ನು ಜಯಿಸಿತು.
ಸಿಎಆರ್ ವಿಭಾಗ, ಉತ್ತರ ವಿಭಾಗ, ದಕ್ಷಿಣ ವಿಭಾಗ, ಸಂಚಾರ ವಿಭಾಗ, ಮಹಿಳಾ ವಿಭಾಗ ಹಾಗೂ ಧಾರವಾಡ ವಿಭಾಗ ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದವು.
ಕಾರ್ಯಕ್ರಮದಲ್ಲಿ ಡಿಸಿಪಿಗಳಾದ ರವೀಶ್ ಸಿ.ಆರ್, ರಾಜೀವ್ ಎಂ., ಎಸಿಪಿಗಳಾದ ಬಲ್ಲಪ್ಪ ನಂದಗಾವಿ, ವಿನೋದ ಮುಕ್ತೇದಾರ, ಆರ್.ಕೆ.ಪಾಟೀಲ ಸೇರಿದಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳು, ಕುಟುಂಬಸ್ಥರು ಇತರರು ಭಾಗವಹಿಸಿದ್ದರು
ಪೊಲೀಸ್ ಪೇದೆ ಆರೋಗ್ಯಕ್ಕಾಗಿ “ಲಕ್ಷ” ರೂಪಾಯಿ ನೀಡಿದ ಡಿಸಿಪಿ ರವೀಶ ಸಿಆರ್…!
ಬಿಜೆಪಿಗೆ ಮತ್ತೆ ಮಗ್ಗುಲ ಮುಳ್ಳಾದ ಪುತ್ತಿಲ ಪರಿವಾರ, ಲೋಕಸಭೆಗೆ ಪಕ್ಷೇತರವಾಗಿ ಸ್ಪರ್ಧಿಸಲು ಪ್ಲಾನ್ ರೆಡಿ!