ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ನೇರ ಹೊಣೆಗಾರರಾಗಿರುವ ಕೆ.ಎಸ್ ಈಶ್ವರಪ್ಪ ಅವರು ಕಡೆಗೂ ತಮ್ಮ ತಪ್ಪಿನ ಅರಿವಾಗಿ ಇಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಪ್ರತಿಭಟನೆಗೆ ಸಂದ ಜಯ ಎಂಬುದಾಗಿ ಶಾಸಕ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ನೇರ ಹೊಣೆಗಾರರಾಗಿರುವ ಕೆ.ಎಸ್ ಈಶ್ವರಪ್ಪ ಅವರು ಕಡೆಗೂ ತಮ್ಮ ತಪ್ಪಿನ ಅರಿವಾಗಿ ಇಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಪ್ರತಿಭಟನೆಗೆ ಸಂದ ಜಯ. 1/4#KillerBJP
— B Z Zameer Ahmed Khan (@BZZameerAhmedK) April 15, 2022
ಇಂದು ಸರಣಿ ಟ್ವಿಟ್ ನಲ್ಲಿ ಅವರು, ಕೆ.ಎಸ್ ಈಶ್ವರಪ್ಪ ಅವರಿಂದ ಕೇವಲ ರಾಜೀನಾಮೆ ಪಡೆದರೆ ಸಾಲದು. ಅವರ ಮೇಲೆ ಭ್ರಷ್ಟಾಚಾರ & ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಪ್ರಕರಣ ದಾಖಲಿಸಿ ಕೂಡಲೇ ಬಂಧಿಸಿ, ಜೈಲಿಗೆ ಕಳುಹಿಸಬೇಕು ಎಂದಿದ್ದಾರೆ.
ಕೆ.ಎಸ್ ಈಶ್ವರಪ್ಪ ಅವರಿಂದ ಕೇವಲ ರಾಜೀನಾಮೆ ಪಡೆದರೆ ಸಾಲದು. ಅವರ ಮೇಲೆ ಭ್ರಷ್ಟಾಚಾರ & ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಪ್ರಕರಣ ದಾಖಲಿಸಿ ಕೂಡಲೇ ಬಂಧಿಸಿ, ಜೈಲಿಗೆ ಕಳುಹಿಸಬೇಕು. 2/4#KillerBJP
— B Z Zameer Ahmed Khan (@BZZameerAhmedK) April 15, 2022
ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಪ್ರಕರಣದ ನ್ಯಾಯಾಂಗ ತನಿಖೆ ನಡೆಸಲು ಮಾನ್ಯ ಮುಖ್ಯಮಂತ್ರಿಗಳು ಆದೇಶಿಸಬೇಕು ಮತ್ತು ಮೃತ ಸಂತೋಷ್ ಪಾಟೀಲ್ ಕುಟುಂಬಕ್ಕೆ ರಾಜ್ಯ ಸರ್ಕಾರ ರೂ. 1 ಕೋಟಿ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.
ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಪ್ರಕರಣದ ನ್ಯಾಯಾಂಗ ತನಿಖೆ ನಡೆಸಲು ಮಾನ್ಯ ಮುಖ್ಯಮಂತ್ರಿಗಳು ಆದೇಶಿಸಬೇಕು ಮತ್ತು ಮೃತ ಸಂತೋಷ್ ಪಾಟೀಲ್ ಕುಟುಂಬಕ್ಕೆ ರಾಜ್ಯ ಸರ್ಕಾರ ರೂ. 1 ಕೋಟಿ ಪರಿಹಾರ ನೀಡಬೇಕೆಂದು ಆಗ್ರಹಿಸುತ್ತೇನೆ. 3/4#KillerBJP
— B Z Zameer Ahmed Khan (@BZZameerAhmedK) April 15, 2022
ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆದಾರರಾದ ಮೃತ ಸಂತೋಷ್ ಪಾಟೀಲ್ ಮಾಡಿರುವ ಶೇಕಡ 40% ಕಮಿಷನ್ ಭ್ರಷ್ಟಾಚಾರ ಆರೋಪದ ಕುರಿತು ರಾಜ್ಯಪಾಲರು ಮತ್ತು ಕೇಂದ್ರ ಸರ್ಕಾರ ತನಿಖೆಗೆ ಆದೇಶಿಸಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೇಳಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆದಾರರಾದ ಮೃತ ಸಂತೋಷ್ ಪಾಟೀಲ್ ಮಾಡಿರುವ ಶೇಕಡ 40% ಕಮಿಷನ್ ಭ್ರಷ್ಟಾಚಾರ ಆರೋಪದ ಕುರಿತು ರಾಜ್ಯಪಾಲರು ಮತ್ತು ಕೇಂದ್ರ ಸರ್ಕಾರ ತನಿಖೆಗೆ ಆದೇಶಿಸಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. 4/4#KillerBJP
— B Z Zameer Ahmed Khan (@BZZameerAhmedK) April 15, 2022




