political news
ಬೆಂಗಳೂರು(ಫೆ.14): ದೆಹಲಿ ಮುಂಬೈನಲ್ಲಿರುವ ಬಿಬಿಸಿ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ, ಈ ಹಿನ್ನಲೆಯಲ್ಲಿ ಸಿಬ್ಬಂದಿಗಳ ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆಯಲಾಗಿದ್ದು, ಕಡತಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಬಿಬಿಸಿಯ ಸಿಬ್ಬಂದಿಗಳಿಗೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ದೆಹಲಿಯ ಕೆಜಿ ಮಾರ್ಗ್‌ನಲ್ಲಿರುವ ಬಿಬಿಸಿ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ಮಂಗಳವಾರ ದಾಳಿ ನಡೆಸಿದೆ. 60 ರಿಂದ 70 ಸದಸ್ಯರ ತಂಡ ಬಿಬಿಸಿ ಕಚೇರಿಗೆ ಆಗಮಿಸಿ ಶೋಧ ಕಾರ್ಯಾಚರಣೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
ಬಿಬಿಸಿ ಕಛೇರಿಯಲ್ಲಿರುವ ಸಿಬ್ಬಂದಿಗಳನ್ನು ಮನೆಗೆ ಹೋಗಿ ಎಂದು ಅಧಿಕಾರಿಗಳು ಖಡಕ್ ಆಗಿ ಹೇಳಿದ್ದಾರೆ. ಯಾವುದೇ ಸೂಚನೆಯಿಲ್ಲದೆ, ಆದಾಯ ತೆರಿಗೆ ಅಧಿಕಾರಿಗಳು ನಡೆಸಿರುವ ದಾಳಿಯಿಂದ ಬಿಬಿಸಿ ಅಧಿಕಾರಿಗಳು ಶಾಕ್ ಆಗಿದ್ದಾರೆ. ಇನ್ನು ಈ ಹಿನ್ನಲೆಯಲ್ಲಿ ಕಡತಗಳಲ್ಲಿ ಏನೇನಿದೆ? ಜೊತೆಗೆ ಏನೆಲ್ಲಾ ವ್ಯವಹಾರಗಳಾಗಿವೆ ಎನ್ನುವುದನ್ನು ಮುಂದಿನ ಪರಿಶೀಲನೆಗಳಿಂದ ತಿಳಿಯಬೇಕಿದೆ.