ಬೆಂಗಳೂರು: ರಾಜ್ಯದ ಹಲವು ಉದ್ಯಮಿಗಳು, ಅಧಿಕಾರಿಗಳು ಸೇರಿದಂತೆ ಅನೇಕರ ಮೇಲೆ ಇಂದು 50ಕ್ಕೂ ಹೆಚ್ಚು ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಮೂಲಕ ಉದ್ಯಮಿಗಳಿಗೆ ಶಾಕ್ ನೀಡಿದ್ದಾರೆ.
ರಾಜ್ಯಾದ್ಯಂತ 50 ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಸುಮಾರು 600ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿ, ಪರಿಶೀಲನೆ ನಡೆಸುತ್ತಿದೆ.
ಆದಾಯ ತೆರಿಗೆ ಮರೆ ಮಾಚಿದಂ ಉದ್ಯಮಿಗಳು, ಕಚೇರಿ, ಮನೆಯ ಮೇಲೆ ಈ ದಾಳಿ ನಡೆಸಲಾಗಿದೆ. ಗೋವಾ-ಕರ್ನಾಟಕದ ಐಟಿ ಅಧಇಕಾರಿಗಳ ತಂಡದಿಂದ ಈ ದಾಳಿ ನಡೆಸಲಾಗಿದ್ದು, ಹಲವು ಮಹತ್ವದ ದಾಖಲೆಗಳ ಪರಿಶೀಲನೆಯಲ್ಲಿ ಅಧಿಕಾರಿಗಳು ತೊಡಗಿದ್ದಾರೆ.




