- Advertisement -
ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆಯೇ ರಾಜಧಾನಿ ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳು ಭ್ರಷ್ಟರ ಭೇಟೆಗಿಳಿದಿದ್ದಾರೆ.
ಬೆಂಗಳೂರು ನಗರ ಸೇರಿದಂತೆ ಏಕಕಾಲದಲ್ಲಿ 50ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ್ದಾರೆ. ನಗರದ ಉದ್ಯಮಿಗಳ ಮನೆ, ಚಾಟರ್ಡ್ ಅಕೌಂಟೆಂಟ್ ಗಳ ಮನೆ ಕಚೇರಿ ಸೇರಿದಂತೆ ಇಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ತಂಡ ದಾಳಿ ನಡೆಸಿವೆ.
ಬೆಂಗಳೂರು ಮತ್ತು ಗೋವಾ ವಲಯದ 300ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಫೀಲ್ಡಿಗಿಳಿದಿದ್ದು ಪರಿಶೀಲನೆಯಲ್ಲಿ ತೊಡಗಿದ್ದಾರೆ. ಇನ್ನು ವಿವಿಧ ಸರ್ಕಾರಿ ಇಲಾಖೆಗಳ ಗುತ್ತಿಗೆದಾರರ ಮೇಲೂ ಕಣ್ಣಿಟ್ಟಿರುವ ಐಟಿ ಅಧಿಕಾರಿಗಳು ದಾಖಲಾತಿಗಳ ಪರಿಶೀಲನೆ ನಡೆಸ್ತಿದ್ದಾರೆ.
ಇನ್ನು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪನವರ ಆಪ್ತ ಸಹಾಯಕ ಉಮೇಶ್ ರಾಜಾಜಿನಗರದ ನಿವಾಸದ ಮೇಲೂ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
- Advertisement -