www.karnatakatv.net: ಡಿ.ಕೆ ಶಿವಕುಮಾರ್ ಆಪ್ತನ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಹಾನಗಲ್ ಉಪಚುನಾವಣೆ ಹಿನ್ನೆಲೆ ಡಿಕೆಶಿಗೆ ಇರಸು ಮುರುಸು ಮಾಡಲು ಈ ಐಟಿ ದಾಳಿ ನಡೆದಿರಬಹುದು ಎಂದು ಹೇಳಲಾಗುತ್ತಿದ್ದು, ಧಾರವಾಡದ ಗುತ್ತಿಗೆದಾರರು ಮತ್ತು ಉದ್ಯಮಿಯಾದ ಯುಬಿ ಶೆಟ್ಟಿಯ ಮನೆ ಮೇಲೆ ಗೋವಾ ಮೂಲದ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಆದರೆ ಕಾಂಗ್ರೆಸ್ ಮುಖಂಡ ಹಾಗೂ ಡಿಕೆಶಿ ಆಪ್ತರಾದ ರಾಬರ್ಟ್ ದದ್ದಾಪೂರಿ ಹಾನಗಲ್ ಉಪಚುನಾವಣೆಯಲ್ಲಿ ಯುಬಿ ಶೆಟ್ಟಿ ಭಾಗವಹಿಸಿಲ್ಲ ಎಂದಿದ್ದಾರೆ.
ಅಲ್ಲದೇ ಯುಬಿ ಶೆಟ್ಟಿ ಅವರು ಉಡುಪಿ ವಿಧಾನ ಪರಿಷತ್ ಚುನಾವಣೆಯ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾದ್ದಾರೆ. ಹೀಗಾಗಿ ಅವರ ಮೇಲೆ ಐಟಿ ದಾಳಿ ನಡೆದಿರಬಹುದು ಎಂದು ಹೇಳಿದ್ದಾರೆ. ಧಾರವಾಡದ ದಾಸನಕೊಪ್ಪ ಸರ್ಕಲ್‌ನಲ್ಲಿ ಗುತ್ತಿಗೆದಾರ ಯು.ಬಿ. ಶೆಟ್ಟಿ ಅವರ ಮನೆಯಿದೆ. ಇದೇ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಆಪ್ತರಾದ ರಾಬರ್ಟ್ ದದ್ದಾಪುರಿ ಮತ್ತು ಆನಂದ ಜಾಧವ್ ಗೆ ಐಟಿ ಅಧಿಕಾರಿಗಳು ಬುಲಾವ್ ನೀಡಿದ್ದಾರೆ. ಕಾಂಗ್ರೆಸ್ ಮುಖಂಡರಿಬ್ಬರೂ ಯು.ಬಿ. ಶೆಟ್ಟಿ ಮನೆಗೆ ಆಗಮಿಸಿದಾಗ ಅವರನ್ನೂ ಅಧಿಕಾರಿಗಳು ಮನೆಯೊಳಗೆ ಕರೆದೊಯ್ದಿದ್ದಾರೆ. ಗೋವಾದಿಂದ ಬಂದಿರುವ ಐವರು ಐಟಿ ಅಧಿಕಾರಿಗಳಿಂದ ಪರಿಶೀಲನೆ ನಡೆದಿದೆ.