Saturday, December 21, 2024

Latest Posts

ಇದು “ಕುಂಬಳಕಾಯಿ ಕಳ್ಳರು ಹೆಗಲು ಮುಟ್ಟಿಕೊಂಡ” ಹಾಗಾಯಿತು: ಬಿಜೆಪಿ ಬಗ್ಗೆ ವ್ಯಂಗ್ಯವಾಡಿದ ಸಿಎಂ

- Advertisement -

Political news: ಈ ಬಾರಿ ನವರಾತ್ರಿಗೆ ಕಾಂಗ್ರೆಸ್ ಪಕ್ಷ ದುಷ್ಟ ಶಕ್ತಿ ಎದುರು ಸತ್ಯದ ಜಯ ಎಂಬ ಜಾಾಹೀರಾತು ನೀಡಿತ್ತು. ಅದರಲ್ಲಿ ನವರಾತ್ರಿಗೆ 9 ರೀತಿಯ ಸಂಹರಿಸಬೇಕಾದ ದುಷ್ಟಶಕ್ತಿಗಳು ಎಂದು ಬರೆದಿತ್ತು. ಈ ಜಾಹೀರಾತಿಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಟ್ವೀಟ್ ಮಾಡಿ, ಬಿಜೆಪಿ ವಿರುದ್ಧ ವ್ಯಂಗ್ಯಾವಾಡಿದ್ದಾರೆ.

ದುಷ್ಟರಿಗೆ ಶಿಕ್ಷೆ, ಶಿಷ್ಟರಿಗೆ ರಕ್ಷೆ ನೀಡುವುದೇ ದಸರೆಯ ಸಂದೇಶ. ವಿಜಯನಗರ ಅರಸರು ವಿಜಯದ ಸಂಕೇತವಾಗಿ ಪ್ರಾರಂಭಿಸಿರುವ ಆಯುಧಪೂಜೆ – ದಸರಾ ಉತ್ಸವವನ್ನು ಮೈಸೂರು ಒಡೆಯರ್ ಮುಂದುವರೆಸಿದ್ದು, ಇಂದಿಗೂ ಆ ಪರಂಪರೆಯನ್ನು ಪಾಲಿಸಲಾಗುತ್ತಿದೆ.

ಜನಪರವಾಗಿರುವ ನಮ್ಮ ಸರ್ಕಾರವನ್ನು ದುಷ್ಟರಿಂದ ರಕ್ಷಿಸು ಎಂದು ಜಾಹೀರಾತಿನ ಮೂಲಕ ಪ್ರಾರ್ಥಿಸಲಾಗಿದೆ. ಇದು ದಸರಾದ ಆಶಯವೂ ಆಗಿದೆ. ಇಡೀ ಜಾಹೀರಾತಿನಲ್ಲಿ ಯಾವುದೇ ವ್ಯಕ್ತಿ ಅಥವಾ ಪಕ್ಷದ ಹೆಸರು ಹೇಳಿಲ್ಲ. ಬೇರೆ ಯಾರಿಗೂ ಇಲ್ಲದ ಸಮಸ್ಯೆ ಬಿಜೆಪಿಯವರಿಗೆ ಮಾತ್ರ ಯಾಕೆ ಕಾಡಿದೆ? ಇದು “ಕುಂಬಳಕಾಯಿ ಕಳ್ಳರು ಹೆಗಲು ಮುಟ್ಟಿಕೊಂಡ” ಹಾಗಾಯಿತು.

- Advertisement -

Latest Posts

Don't Miss