Hassan News: ಹಾಸನ : ತುರ್ತು ಸಮನ್ವಯ ಸಭೆ ಬಳಿಕೆ ಬಿಜೆಪಿ ರಾಜ್ಯ ಚುನಾವಣೆ ಉಸ್ತುವಾರಿ ರಾಧಾಮೋಹನ್ ಅಗರ್ವಾಲ್ ಹಾಸನಕ್ಕೆ ಭೇಟಿ ನೀಡಿ, ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದು, ಗೆಲ್ಲುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಮ್ಮ ಪಕ್ಷದ ಜಿಲ್ಲಾ ಘಟಕದ ಕಾರ್ಯಕರ್ತರು ತುಂಬಾ ವಿಶ್ವಾಸದಲ್ಲಿದ್ದಾರೆ. ಈ ಬಾರಿ ಮೋದಿ ಸರ್ಕಾರ ತರಬೇಕು ಎಂದು ಅವರು ಕೆಲಸ ಮಾಡುತ್ತಿದ್ದಾರೆ. ನನ್ನಷ್ಟೇ ಉತ್ಸಾಹದಲ್ಲಿ ಅವರು ಕೆಲಸ ಮಾಡುತ್ತಿದ್ದಾರೆ. ಮಾಧುಸ್ವಾಮಿ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸೋಮಣ್ಣ ಪರ ಪ್ರಚಾರ ಮಾಡುತ್ತಿದ್ದಾರೆ. ಈಶ್ವರಪ್ಪ ವಿಚಾರದಲ್ಲಿ ಸಣ್ಣ ಸಮಸ್ಯೆ ಇರುವುದನ್ನು ಒಪ್ಪಿಕೊಂಡಿದ್ದೇನೆ. ಅವರು ಕೂಡ ನರೇಂದ್ರಮೋದಿ ಪರ ಪ್ರಚಾರ ನಡೆಸುತ್ತಿದ್ದಾರೆ. ಅವರು ನಾಮಪತ್ರ ವಾಪಾಸ್ ಪಡೆಯದಿದ್ದರೆ ಆಗ ಅವರನ್ನು ಬಗ್ಗೆ ಪ್ರಶ್ನಿಸಿ. ಅವರು ಮೋದಿ ಮತ್ತು ಬಿಜೆಪಿ ಪರ ಕೆಲಸ ಮಾಡುತ್ತಿದ್ದಾರೆ. ಅವರು ಗೆದ್ದ ನಂತರ ಬಿಜೆಪಿ ಜೊತೆ ವಿಲೀನ ಆಗುತ್ತದೆ ಎಂದೇ ಹೇಳುತ್ತಿದ್ದಾರೆ ಎಂದಿದ್ದಾರೆ.
ಬೆಂಗಳೂರು ಗ್ರಾಮಾಂತರದ ಚುನಾವಣೆ ಐತಿಹಾಸಿಕವಾಗಲಿದೆ. ನಮ್ಮ ಎದುರಾಳಿ ಬಳಿ ಅಪಾರವಾದ ಸಂಪತ್ತು ಇದೆ. ಐನೂರು ಕೋಟಿಗೂ ಹೆಚ್ಚು ಆಸ್ತಿ ಹೊಂದಿರುವವರು ಯಾವ ವ್ಯಾಪಾರ ಮಾಡುತ್ತಿದ್ದಾರೆ ತಿಳಿಯದು. ಅವರ ಎದುರಿಗೆ ತಮ್ಮ ಜೀವನ ಪೂರ್ತಿ ನಿಸ್ವಾರ್ಥ ಸೇವೆ ಮಾಡಿರು ಮಂಜುನಾಥ್ ಅವರು ತಮ್ಮ ಪ್ರಾಮಾಣಿಕತೆಗೆ ಹೆಸರಾಗಿದ್ದಾರೆ. ಅವರ ಬಳಿ ಚುನಾವಣೆ ನಡೆಸಲು ಹಣವಿಲ್ಲ. ಕಾಂಗ್ರೆಸ್ ಅಭ್ಯರ್ಥಿ ಹೀನಾಯವಾಗಿ ಸೋಲಲಿದ್ದಾರೆ ಎಂದು ರಾಧಾಮೋಹನ್ ಭವಿಷ್ಯ ನುಡಿದಿದ್ದಾರೆ.
ಲೋಕಸಭಾ ಚುನಾವಣೆ ನಂತರ ಮೈತ್ರಿ ಮುಂದುವರಿಕೆ ವಿಚಾರದ ಬಗ್ಗೆ ಮಾತನಾಡಿದ ರಾಧಾಮೋಹನ್, ನಾವು ಕಂಟ್ರ್ಯಾಕ್ಟ್ ಮದುವೆಯಾಗುವುದಿಲ್ಲ. ಮದುವೆ ಎನ್ನುವುದು ನಮಗೆ ಧಾರ್ಮಿಕವಾದ ಕಾರ್ಯ. ದೀರ್ಘಕಾಲ ಜೊತೆಯಾಗಿ ನಡೆಯಲು ಸಂಬಂಧ ಬೆಳೆಸುತ್ತೇವೆ. ಎರಡು ಕೈಸೇರಿದರೆ ಚಪ್ಪಾಳೆ ಆಗುತ್ತದೆ. ನಾವು ಸಹ ಈ ಸಂಬಂಧ ಮುಂದುವರೆಯುವುದನ್ನು ಬಯಸುತ್ತೇವೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಮತ ಹಾಕುವಂತೆ ಪ್ರೀತಂಗೌಡ ಬೆಂಬಲಿಗರ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ರಾಧಾ ಮೋಹನ್ ಅಗರ್ವಾಲ್, ಇದು ಸತ್ಯಕ್ಕೆ ದೂರವಾದ ವಿಚಾರ. ನಾವು ಹಾಸನದಲ್ಲಿ ಸಮೀಕ್ಷೆ ನಡೆಸಿದ್ದೇವೆ, ಆ ರೀತಿ ಎಲ್ಲೂ ಕಂಡುಬಂದಿಲ್ಲ. ಉತ್ತರಪ್ರದೇಶದಲ್ಲಿ ಚುನಾವಣೆ ನಡೆಯುತ್ತಿದೆ. ನಾನು ಇಲ್ಲಿನ ಕೆಲಸ ಬಿಟ್ಟು ಉತ್ತರಪ್ರದೇಶಕ್ಕೆ ಹೋದರೆ ನಮ್ಮ ಪಕ್ಷ ಅದನ್ನು ಇಷ್ಟಪಡುತ್ತದೆಯೇ..? ನಾವು ಒಂದು ಸಂಘಟನೆ ನಮಗೆ ಎಲ್ಲಿ ಕೆಲಸ ನೀಡಲಾಗುತ್ತದೆಯೋ ಅಲ್ಲಿ ಅವರ ಕೆಲಸದ ಮೇಲೆ ಮೌಲ್ಯಮಾಪನ ನಡೆಯುತ್ತದೆ. ಅವರು ಮೈಸೂರು ಬಿಟ್ಟು ಬಂದರೆ ನಾನು ಅವರ ಮೇಲೆ ವಿಚಾರಣೆ ನಡೆಸುತ್ತೇನೆ ಎಂದು ರಾಧಾ ಮೋಹನ್ ಹೇಳಿದ್ದಾರೆ.
ಕಾಂಗ್ರೆಸ್‌ನ ಐದು ಗ್ಯಾರೆಂಟಿಗಳ ಬಗ್ಗೆಯೇ ಗ್ಯಾರೆಂಟಿ ಇಲ್ಲ. ನಾನು ನಿಮಗೆ ಗ್ಯಾರೆಂಟಿ ಕೊಡುತ್ತೇನೆ. ಲೋಕಸಭೆ ಚುನಾವಣೆ ನಂತರ ಕರ್ನಾಟಕ ಕಾಂಗ್ರೆಸ್‌ನ ಐದು ಗ್ಯಾರೆಂಟಿಗಳು ಸ್ಥಗಿತಗೊಳ್ಳಲಿವೆ. ಅವರ ಸರ್ಕಾರವೇ ಐದು ಗ್ಯಾರೆಂಟಿಗಳನ್ನು ಬಂದ್ ಮಾಡಲಿದೆ. ಅವರ ಬಳಿ ಹಣವೇ ಇಲ್ಲ. ಈಗ ಅವರು ಮಾಡುತ್ತಿರುವ ಘೋಷಣೆಗಳೆಲ್ಲಾ ಚುನಾವಣೆ ಘೋಷಣೆ. ಹತ್ತು ವರ್ಷದಿಂದ ಏನು ಹೇಳಿದ್ದೇವು ಆ ಕೆಲಸ ಮಾಡಿ ತೋರಿಸಿದ್ದೇವೆ ಎಂದು ರಾಧಾ ಮೋಹನ್ ಅಗರ್ವಾಲ್ ಹೇಳಿದ್ದಾರೆ.
ಸಾಕ್ಷಿಯ ವಿಚಾರಣೆಗೂ, ಆರೋಪಿಯ ವಿಚಾರಣೆಗೂ ವ್ಯತ್ಯಾಸ ತಿಳಿದಿಲ್ಲವೇ?: ಕಾಂಗ್ರೆಸ್ಸಿಗರಿಗೆ ಪ್ರೀತಂಗೌಡ ಪ್ರಶ್ನೆ..
ಕಾಂಗ್ರೆಸ್‌ನವರು ಉದರಿ ಭಾಗ್ಯಗಳ ಬಗ್ಗೆ ಪ್ರಚಾರ ಮಾಡಿದ್ರೆ ನಡೆಯುತ್ತಾ..?: ಲಾಡ್‌ಗೆ ಜೋಶಿ ತಿರುಗೇಟು..