Thursday, May 30, 2024

Latest Posts

ಜೆ.ಪಿ ನಗರದ ಶ್ರೀ ಸತ್ಯ ಗಣಪತಿ ದೇವಸ್ಥಾನದಲ್ಲಿ ಪರಿಸರ ಸ್ನೇಹಿ ಗೌರಿ ಗಣೇಶ ಮೂರ್ತಿಗಳ ವಿತರಣೆ

- Advertisement -

Banglore News:

ಗಣೇಶ ಚತುರ್ಥಿಯ ಪ್ರಯುಕ್ತ ಜೆ.ಪಿ ನಗರದ ಶ್ರೀ ಸತ್ಯ ಗಣಪತಿ ದೇವಸ್ಥಾನದಲ್ಲಿ 10 ಸಾವಿರ ಪರಿಸರ ಸ್ನೇಹಿ ಗೌರಿ ಗಣೇಶ ಮೂರ್ತಿಗಳ ವಿತರಣೆಯನ್ನು ಆಯೋಜಿಸಲಾಗಿದೆ. ಪ್ರತಿವರ್ಷ ಹೊಸದೊಂದು ಥೀಮ್‌ ನಲ್ಲಿ ಗಣೇಶ ಮೂರ್ತಿಯನ್ನ ಪ್ರತಿಷ್ಠಾಪಿಸುವ ಹಾಗೂ ವಿಶೇಷ ಅಲಂಕಾರವನ್ನು ಮಾಡುವ ಮೂಲಕ ದೇಶದ ಗಮನವನ್ನು ಸೆಳೆಯುತ್ತಿದ್ದ ಶ್ರೀ ಸತ್ಯಗಣಪತಿ ಶಿರಡಿ ಸಾಯಿ ದೇವಸ್ಥಾನದಲ್ಲಿ ಈ ಬಾರಿ 10 ಸಾವಿರ ಪರಿಸರ ಸ್ನೇಹಿ ಗೌರಿ ಗಣೇಶ ಮೂರ್ತಿಗಳನ್ನು ವಿತರಿಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.ಅಲ್ಲದೆ ಮೂರು ಬಗೆಯ ಹಣ್ಣುಗಳಿಂದ ದೇವಸ್ಥಾನದಲ್ಲಿ ವಿಶೇಷ ಆಲಂಕಾರವನ್ನು ಮಾಡಲಾಗುವುದು ಎಂದು ಶ್ರೀ ಸತ್ಯ ಗಣಪತಿ ಶಿರಡಿ ಸಾಯಿ ಟ್ರಸ್ಟ್‌ನ ಟ್ರಸ್ಟಿಗಳಾದ ರಾಮ್‌ ಮೋಹನ ರಾಜ್‌ ತಿಳಿಸಿದ್ದಾರೆ.ಸೋಮವಾರ 29ರಂದು ಬೆಳಿಗ್ಗೆ 10 ಗಂಟೆಗೆ ಪರಿಸರಸ್ನೇಹಿ ಗೌರಿ- ಗಣೇಶನ ವಿಗ್ರಹವನ್ನು ವಿತರಣೆ ಮಾಡಲಾಗುವುದು. ಶಾಸಕ ಸತೀಶ್ ರೆಡ್ಡಿ, ಸಂಸದ ತೇಜಸ್ವಿ ಸೂರ್ಯ ಅವರು ಭಕ್ತರಿಗೆ ಪ್ರಸಾದದ ರೂಪದಲ್ಲಿ ಗೌರಿ-ಗಣೇಶನ ಮೂರ್ತಿಯನ್ನು ಉಚಿತವಾಗಿ ವಿತರಣೆ ಮಾಡಲಿದ್ದಾರೆ.

ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಸಿರಿಧಾನ್ಯ ಸಂಸ್ಕರಣಾ ಘಟಕಗಳ ಸ್ಥಾಪನೆ- CM ಬೊಮ್ಮಾಯಿ

ಮಂಗಳೂರು: ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಬೃಹತ್ ಪೆಂಡಾಲ್ ನಿರ್ಮಾಣ

ರಾಯಚೂರಿನಲ್ಲಿ ಆರಾಧನಾ ಮಲ್ಟಿ ಸ್ಪೆಷಾಲಟಿ ಆಸ್ಪತ್ರೆ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

- Advertisement -

Latest Posts

Don't Miss