www.karnatakatv.net: ಹುಬ್ಬಳ್ಳಿ: ವಾಣಿಜ್ಯನಗರಿಯಲ್ಲಿ ನಡೆಯುತ್ತಿರುವ ಬಹು ನಿರೀಕ್ಷಿತ ಸ್ಮಾರ್ಟ್ ಸಿಟಿ ಕಾಮಗಾರಿಯನ್ನು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪರಿಶೀಲನೆ ನಡೆಸಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಹುಬ್ಬಳ್ಳಿಯ ಉಣಕಲ್ ಕೆರೆ, ತೋಳನಕೆರೆ, ವಾರ್ಡ್ ನಂಬರ 52ರ ಡಾಲರ್ಸ್ ಕಾಲೋನಿ ಕಾಮಗಾರಿ, ಗ್ಲಾಸ್ ಹೌಸ್ ಕಾಮಗಾರಿ ಹಾಗೂ ಜೆ.ಸಿ.ನಗರದ ವಿವಿಧ ಕಾಮಗಾರಿಗಳ ವೀಕ್ಷಣೆ ಮಾಡಿದರು.
ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈಗಾಗಲೇ ಅಧಿಕ ಪ್ರಮಾಣದಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗಿದ್ದು, ಈ ನಿಟ್ಟಿನಲ್ಲಿ ಪಾರ್ಕಿಂಗ್ ಕಾಂಪ್ಲೆಕ್ಸ್ ನಿರ್ಮಾಣವನ್ನು ಮಾಡಲು ಚಿಂತನೆ ನಡೆಸಲಾಗಿದೆ. ಹುಬ್ಬಳ್ಳಿ ಧಾರವಾಡ ಮಹಾನಗರ ದಿನದಿಂದ ದಿನಕ್ಕೆ ಬೆಳೆಯುತ್ತಾ ಹೋಗುತ್ತಿದೆ. ಈ ನಿಟ್ಟಿನಲ್ಲಿ ಸ್ಮಾರ್ಟ್ ಸಿಟಿ ಅಥವಾ ಇನ್ನಿತರ ಯಾವುದಾದರೂ ಯೋಜನೆಯಲ್ಲಿ ಪಾರ್ಕಿಂಗ್ ಕಾಂಪ್ಲೆಕ್ಸ್ ನಿರ್ಮಾಣ ಮಾಡಬೇಕಿದೆ ಎಂದರು.
ಇನ್ನೂ ಅಧಿಕಾರಗಳೊಂದಿಗೆ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕೂಡಲೇ ನಿರ್ಮಾಣ ಕಾಮಗಾರಿ ಚುರುಕುಗೊಳಿಸಬೇಕು ಎಂದು ಖಡಕ್ ಎಚ್ಚರಿಕೆ ನೀಡಿದರು.
ಕರ್ನಾಟಕ ಟಿವಿ – ಹುಬ್ಬಳ್ಳಿ