Hubballi News: ಹುಬ್ಬಳ್ಳಿ: ಹುಬ್ಬಳ್ಳಿಯ ತಮ್ಮ ನಿವಾಸದಲ್ಲಿ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬಿಜೆಪಿಯಲ್ಲಿನ ಅಸಮಾಧಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿಯಲ್ಲಿ ಬಹಳಷ್ಟು ಅಸಮಾಧಾನ ಇದೆ. ಬಿಜೆಪಿಯಲ್ಲಿನ ಅಸಮಾಧಾನ ಯಾವಾಗ ಸ್ಫೋಟ ಆಗುತ್ತೆ ಎಂದು ಗೊತ್ತಾಗಲ್ಲ. ನಾವು ಸೋತ ಬಿಜೆಪಿ ಅಭ್ಯರ್ಥಿಗಳನ್ನ ಸೆಳೆಯುತ್ತಿಲ್ಲ. ಅಲ್ಲೆ ಬಿರುಕು, ಅಸಮಾಧಾನ ಆಗುತ್ತಿದೆ ಎಂದಿದ್ದಾರೆ.
ವಿಧಾನ ಪರಿಷತ್‌ನಲ್ಲಿ ಜನಪ್ರತಿನಿಧಿಯಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ರಾಷ್ಟ್ರೀಯ ಕಾಂಗ್ರೆಸ್ ಪಾರ್ಟಿ ನನಗೊಂದು ಅವಕಾಶ ಮಾಡಿಕೊಟ್ಟಿದೆ. ಕಾಂಗ್ರೆಸ್ ಪಕ್ಷದ ರಾಷ್ಟ್ರ, ರಾಜ್ಯದ ನಾಯಕರಿಗೆ ಧನ್ಯವಾದವನ್ನು ಸಲ್ಲಿಸುತ್ತೇನೆ. ಪರಿಷತ್ ಸದಸ್ಯನಾಗಿ ಆಯ್ಕೆಯಾಗಿದ್ದು ನನ್ನ ರಾಜಕೀಯ ಜೀವನದಲ್ಲಿ ಹೊಸ ಅಧ್ಯಾಯ. ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಪರಿಷತ್‌ನಲ್ಲಿ ಚರ್ಚೆ ಮಾಡುತ್ತೇನೆ. ಈ ಭಾಗದ ಅನೇಕ ಅಭಿವೃದ್ಧಿ ಕೆಲಸ ಕಾರ್ಯಗಳು ನೆನಗುದಿಗೆ ಬಿದ್ದಿವೆ, ಅವುಗಳನ್ನ ಆದಷ್ಟು ಬೇಗ ಪರಿಹಾರ ಮಾಡಲಿಕ್ಕೆ ಸಂಬಂಧಪಟ್ಟ ಸಚಿವರೊಂದಿಗೆ ಚರ್ಚೆ ಮಾಡುತ್ತೇನೆ ಎಂದು ಶೆಟ್ಟರ್ ಹೇಳಿದ್ದಾರೆ.
ಅಲ್ಲದೇ, ರಾಜಕೀಯದಲ್ಲಿ ಬೇರೆ ಬೇರೆ ಅಧ್ಯಾಯಗಳಿರ್ತಾವೆ. ಇದು ನನ್ನ ಹೊಸ ಅಧ್ಯಾಯ, ಎರಡನೆಯ ಇನ್ನಿಂಗ್ಸ್. ವಿಧಾನ ಪರಿಷತ್ ಸದಸ್ಯ ಮಾಡುವಾಗ ಕಾಂಗ್ರೆಸ್ ಜಗದೀಶ್ ಶೆಟ್ಟರ್‌ಗೆ ಇನ್ನೂ ಉನ್ನತ ಸ್ಥಾನಮಾನಗಳನ್ನ ನೀಡತ್ತೆ ಎಂದು ಹೇಳಿದೆ. ಸಭಾಪತಿ ಮಾಡುವುದು ಕಾಂಗ್ರೆಸ್‌ಗೆ ಬಿಟ್ಟ ವಿಚಾರ, ಸಭಾಪತಿ ನೀಡುವ ವಿಷವನ್ನು ನಮ್ಮ ಪಕ್ಷ ಪ್ರಸ್ತಾಪ ಮಾಡಿಲ್ಲ. ವೇಟ್ & ಸಿ, ನಾನು ಕಾದು ನೋಡ್ತೇನೆ, ನೋಡೋಣ ಎನ್ನುವ ಮೂಲಕ ಶೆಟ್ಟರ್ ಪರೋಕ್ಷವಾಗಿ ಸಭಾಪತಿ ಸ್ಥಾನಕ್ಕೆ ಒಮ್ಮತ ವ್ಯಕ್ತಪಡಿಸಿದ್ದಾರೆ.
ಲೋಕಸಭಾ ಚುನಾವಣೆ ದೃಷ್ಟಿಯಿಂದ ಈಗಾಗಲೇ ನಮ್ಮ ಪಕ್ಷದ ವರಿಷ್ಠ ಜತೆಗೆ ಚರ್ಚೆ ಮಾಡಿದ್ದೇನೆ. ಲೋಕಸಭಾ ಚುನಾವಣೆಯಲ್ಲಿ ಪಕ್ಷ ಯಾವುದೇ ಜವಾಬ್ದಾರಿ ಕೊಟ್ಟರು ನಾನು ಸಿದ್ದನಿದ್ದೇನೆ. ಎಲ್ಲಿಯೇ ಪ್ರವಾಸ ಮಾಡಿ ಅಂದ್ರು ನಾನು ನನ್ನ ಸಮಯವನ್ನ ಕೊಡ್ತೇನೆ. ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಾನ ಗೆಲ್ಲಲು ನಾನೂ ಪ್ರಯತ್ನ ಮಾಡ್ತೇನೆ ಎಂದು ಶೆಟ್ಟರ್ ಹೇಳಿದ್ದಾರೆ.
ಈ ಚುನಾವಣೆಯಲ್ಲಿ ನಿಮ್ಮ ಉಪಯೋಗ ತೆಗೆದುಕೊಳ್ಳುತ್ತೆವೆ ಎಂದು ನಮ್ಮ ಪಕ್ಷ ಹೇಳಿದೆ. ಉತ್ತರ ಕರ್ನಾಟಕದಲ್ಲಿ 11 ಲೋಕಸಭಾ ಕ್ಷೇತ್ರಗಳು ಬರ್ತಾವೆ. ಅದರಲ್ಲಿ 6-7 ಕ್ಷೇತ್ರದಲ್ಲಿ ಗೆಲ್ಲುವ ಗುರಿ ಇಟ್ಟುಕೊಂಡಿದ್ದೇವೆ. ನಮಗೆ ಈಗಾಗಲೇ ಜನರಿಂದ ಬೆಂಬಲ ಸಿಗುತ್ತಿದೆ. ಒಳ ಒಪ್ಪಂದ ಮಾಡಿದವರು ಯಾರು, ಅವರ ಹೆಸರನ್ನ ಪ್ರತಾಪ್ ಸಿಂಹ ಬಹಿರಂಗ ಪಡಿಸಲಿ. ಪಕ್ಷದ ನಾಲ್ಕು ಗೋಡೆಗಳ ಮಧ್ಯ ಚರ್ಚೆ ಮಾಡುವ ವಿಚಾರವನ್ನ ಅವರು ಬಹಿರಂಗ ಮಾಡಿದ್ದಾರೆ. ಬಹಿರಂಗವಾಗಿ ಅವರ ಹೆಸರನ್ನ ಹೇಳಿಬಿಡಲಿ. ಅವರ್ಯಾರು ಎಂಬುದು ಜನರಿಗೆ ಗೊತ್ತಾಗಲಿ ಎಂದು ಶೆಟ್ಟರ್ ಹೇಳಿದ್ದಾರೆ.
‘ಮೊದಲು ಸುಳ್ಳು ಸುದ್ದಿ ಹಬ್ಬಿಸಿರುವ ಡಿಕೆಶಿ, ಸಿದ್ದರಾಮಯ್ಯ ವಿರುದ್ಧ ಕ್ರಮ ಕೈಗೊಳ್ಳಬೇಕು’
ಅಧಿಕಾರಿಗಳು, ಗುತ್ತಿಗೆದಾರರ ಲಂಚಾವತಾರದ ವಿರುದ್ಧ ಪ್ರತಿಭಟನೆ ಎಚ್ಚರಿಕೆ ನೀಡಿದ ನೌಕರರು
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಭೇಟಿ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್