Political News: ಹುಬ್ಬಳ್ಳಿ :ನನ್ನ ತಂಟೆಗೆ ಬಂದರೆ ಸುಮ್ಮನೆ ಬಿಡಲ್ಲವೆಂದು ವಿರೋಧಿಗಳಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಎಚ್ಚರಿಕೆ ಕೊಟ್ಟಿದ್ದಾರೆ.
68ನೇ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ‘ಕಳೆದ ವರ್ಷವೂ ಇದೇ ಮಾತು ಹೇಳಿದ್ದೆ, ತಂಟೆಗೆ ಬಂದವರಿಗೆ ಉತ್ತರಿಸಿದ್ದೇನೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾನು ಸೋತಿರಬಹುದು. ಆದರೆ, 6 ಬಾರಿ ನನ್ನನ್ನು ಜನ ಗೆಲ್ಲಿಸಿರುವುದನ್ನು ಮರೆಯುವುದಿಲ್ಲ. ನಾನು ಸೋತರೂ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚು ಸ್ಥಾನ ಗೆಲ್ಲಿಸಿದ್ದೇವೆ. ನನ್ನ ಉಸಾಬರಿಗೆ ಬಂದವರಿಗೆ ತಕ್ಕ ಉತ್ತರ ಕೊಟ್ಟಿದ್ದೇನೆ. ಇನ್ಮುಂದೆಯೂ ನನ್ನ ಉಸಾಬರಿಗೆ ಬಂದವರನ್ನು ಸುಮ್ಮನೆ ಬಿಡಲ್ಲ ಎಂದು ಹುಬ್ಬಳ್ಳಿಯ ಸವಾಯಿಗಂಧರ್ವ ಹಾಲ್ನಲ್ಲಿ ಜಗದೀಶ್ ಶೆಟ್ಟರ್ ಎಚ್ಚರಿಕೆ ಕೊಟ್ಟಿದ್ದಾರೆ.
ಶೆಟ್ಟರ್ ಕಡೆಯಿಂದ ಸನ್ಮಾನ ನಿರಾಕರಿಸಿದ ಸಿಎಂ ಸಿದ್ದರಾಮಯ್ಯ.. ಕಾರಣವೇನು..?
ಎಲ್ಲಾ ರೀತಿಯ ಕ್ರಮಕ್ಕೆ ಸರ್ಕಾರ ಸಿದ್ಧವಾಗಿದೆ ಎಂದಿದ್ದಾರೆ: ಕೋವಿಡ್ ಬಗ್ಗೆ ಸಿಎಂ ಮಾತು




