ಹುಬ್ಬಳ್ಳಿ: ಜೆಡಿಎಸ್ – ಬಿಜೆಪಿ ಮೈತ್ರಿ ವಿಚಾರಕ್ಕೆ ಇಬ್ಬರು ಅಸಹಾಯಕರು ಸೇರಿ ಮೈತ್ರಿ ಮಾಡಿಕೊಳ್ತಿದಾರೆ ಎಂದುಮಾಜಿ ಸಿಎಂ ಜಗದೀಶ್ ಶೆಟ್ಟರ ವ್ಯಂಗ್ಯ ವಾಡಿದ್ದಾರೆ.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವುದು ಜೆಡಿಎಸ್ ಮತ್ತು ಬಿಜೆಪಿಗೆ ಬಿಟ್ಟ ವಿಚಾರ. ಹಿಂದೆಯೂ ಮೈತ್ರಿ ಮಾಡಿಕೊಳ್ಳುತ್ತೇವೆ ಅಂದಿದ್ದರು ಆದರೆ ಆದಕ್ಕೆ ನಂತರ ಬ್ರೇಕ್ ಆಯ್ತು. ವಿಧಾನಸಭೆ ಚುನಾವಣೆಯಲ್ಲಿ ಇಬ್ಬರು ಪರಸ್ಪರ ಫೈಟ್ ಮಾಡಿದ್ದರು. ಈಗ ಮತ್ತೆ ಮೈತ್ರಿ ವಿಚಾರ ಮಾತನಾಡುತ್ತಿದ್ದಾರೆ. ಅನುಕೂಲವಿದ್ದಾಗ ಮೈತ್ರಿ ಮಾಡಿಕೊಳ್ಳುವುದು. ಅನಾನುಕೂಲವಾದಾಗ ಮೈತ್ರಿಯಿಂದ ಹಿಂದೆ ಸರಿಯುವುದು ಈ ರೀತಿ ಮಾಡಿದಾಗ ಜನರ ನಂಬಿಕೆಯನ್ನು ಕಳೆದುಕೊಳ್ಳುತ್ತಾರೆ.
ಮಹಾರಾಷ್ಟ್ರದಲ್ಲಿ ಅಜಿತ್ ಪವಾರ್ ಸಾವಿರಾರು ಕೋಟಿ ಹಗರಣ ಮಾಡಿದ್ದಾರೆ ಅಂತ ಆರೋಪ ಮಾಡಿದರು
ಒಂದೇ ತಿಂಗಳಲ್ಲಿ ಅವರನ್ನು ಬಿಜೆಪಿ ಮೈತ್ರಿ ಸರ್ಕಾರದಲ್ಲಿ ಸೇರಿಸಿಕೊಂಡರು. ರಾಜಕೀಯ ಪಕ್ಷಕ್ಕೆ ಗಟ್ಟಿ ನಿರ್ಧಾರಗಳು ಇರಬೇಕು. ಇವತ್ತು ಟೀಕೆ ಮಾಡೋದು, ನಾಳೆ ಮೈತ್ರಿ ಮಾಡಿಕೊಳ್ಳುವುದರಲ್ಲಿ ಏನರ್ಥವಿದೆ
ಮೈತ್ರಿ ಮಾಡಿಕೊಳ್ಳುವುದು ಅವರಿಗೆ ಬಿಟ್ಟದ್ದು, ಆದರೆ ಬಿಜೆಪಿಯವರು ಬಂದ ಪಕ್ಷಗಳನ್ನು ಸರಿಯಾಗಿ ನಡೆಸಿಕೊಳ್ಳಬೇಕು ಎಂದರು.
ಉಡುಪಿಯ ಬೈಂದುರ್ ಶಾಸಕ ಸುಕುಮಾರ್ ಶೆಟ್ಟಿ ಕಾಂಗ್ರೆಸ್ ಸೇರ್ಪಡೆ ಆಗ್ತಿದ್ದಾರೆ. ಹೀಗಾಗಿ ಬಿಜೆಪಿಯವರು ಮೊದಲು ತಮ್ಮಲ್ಲಿ ವ್ಯವಸ್ಥೆಯನ್ನು ಸುಧಾರಿಸಿಕೊಳ್ಳಲಿ, ಕರ್ನಾಟಕದಲ್ಲಿ ಕಾಂಗ್ರೆಸ್ ದಿನದಿಂದ ದಿನಕ್ಕೆ ಮೇಲೆ ಏರ್ತಾ ಇದೆ. ಹಲವಾರು ಬಿಜೆಪಿ ನಾಯಕರು ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿಗೆ ಹೆದರಿಕೆ ಶುರುವಾಗಿದೆ. ಇಡೀ ದೇಶದಲ್ಲಿಯೂ ಬಿಜೆಪಿಗೆ ಇದೇ ಸ್ಥಿತಿ ಇದೆ ತೆಲಂಗಾಣದಲ್ಲಿ ಕಾಂಗ್ರೆಸ್ ನಂಬರ್ ಟು ಸ್ಥಾನದಲ್ಲಿದೆ ಚುನಾವಣೆ ಬರೋ ವೇಳೆಗೆ ನಂಬರ್ ಒನ್ ಸ್ಥಾನಕ್ಕೆ ಬಂದರೂ ಅಚ್ಚರಿ ಇಲ್ಲ ಎಂದರು.
Lokasabha Election: ಬಿಜೆಪಿಗೆ ಲೋಕಸಭೆಯಲ್ಲಿ ಜನ ಮತ್ತೊಮ್ಮೆ ಉತ್ತರ ಕೊಡುತ್ತಾರೆ; ಪರಮೇಶ್ವರ್..!