Political News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಬಿಜೆಪಿಯ ಮತ್ತೊಬ್ಬ ನಾಯಕ ಕಾಂಗ್ರೆಸ್ ಸೇರ್ಪಡೆಗೆ ಸಿದ್ಧತೆ ನಡೆಸಿದ್ದು, ಇಂದು ಮಾಜಿ ಸಿಎಂ, ಕಾಂಗ್ರೆಸ್ ಎಂಎಲ್ಸಿ ಜಗದೀಶ್ ಶೆಟ್ಟರ್ ಅವರ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಕುಂದಗೋಳ ಬಿಜೆಪಿ ಮಾಜಿ ಶಾಸಕ SI ಚಿಕ್ಕನಗೌಡರ ಸಿದ್ದರಾಮಯ್ಯ ಭೇಟಿ ಮಾಡಿ ಕಾಂಗ್ರೆಸ್ ಸೇರ್ಪಡೆ ಕುರಿತಂತೆ ಚರ್ಚೆ ನಡೆಸಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ಸಂಬಂಧಿಯಾಗಿರುವ ಚಿಕ್ಕನಗೌಡರ, ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಸಿದ್ದರಾಮಯ್ಯ ಭೇಟಿ ಮಾಡಿದ್ದಾರೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆ ಚಿಕ್ಕನಗೌಡರ ಪಕ್ಷೇತರವಾಗಿ ಸ್ಪರ್ಧೆ ಮಾಡಿ ಸೋಲುಂಡಿದ್ದರು. ಚುನಾವಣೆ ಬಳಿಕ ಸೈಲೆಂಟ್ ಆಗಿದ್ದ ಅವರು ಕಳೆದ ಕೆಲ ದಿನಗಳ ಹಿಂದೆ ನಾನು ಕಾಂಗ್ರೆಸ್ ಸೇರೋದಾಗಿ ಬಹಿರಂಗ ಹೇಳಿಕೆ ನೀಡಿದ್ದರು.
ಇದೀಗ ಮಾಜಿ ಸಿಎಂ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಸಿದ್ದರಾಮಯ್ಯ ಭೇಟಿ ಮಾಡಿದ್ದು, ಕಾಂಗ್ರೆಸ್ ಸೇರ್ಪಡೆಗೆ ದಿನಾಂಕ ಫೈನಲ್ ಮಾಡುವ ಕುರಿತಂತೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಎರಡು ವಾರಗಳ ಹಿಂದಷ್ಟೇ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದರು. ಇದಕ್ಕೂ ಮುನ್ನ ರಾಮಪ್ಪ ಲಮಾಣಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು.
ಕಾಂಗ್ರೆಸ್ ಪಕ್ಷ ಸೇರ್ಪಡೆ ಬಳಿಕ ಮಾತನಾಡಿದ್ದ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಕೆಪಿಸಿಸಿ ಅಧ್ಯಕ್ಷರು ತಮ್ಮ ಮಾತಿನಲ್ಲಿ ಬಹಳ ದಿನಗಳಿಂದ ಗಾಳ ಹಾಕ್ತಿದ್ದೆ ಎಂದು ಹೇಳಿದರು. ಕೆಲವು ಕಹಿ ಘಟನೆಗಳಿಂದ ನಮ್ಮ ತಂದೆ ಕಾಂಗ್ರೆಸ್ ಬಿಟ್ಟಿದ್ದರು. ಕೊಟ್ಟ ಮಾತಿನಂತೆ ಸರ್ಕಾರದ ನಾಯಕರು ನಡೆಯುತ್ತಿದ್ದಾರೆ. ಸಿದ್ದಾಂತ ನಂಬಿ ಬಂದಿರುವೆ, ಪ್ರಾಮಾಣಿಕವಾಗಿ ಕೆಲಸ ಮಾಡುವಂತೆ ನನ್ನ ತಂದೆ ಹೇಳಿದ್ರು. ಬಹಳಷ್ಟು ಬಾರಿ ನನ್ನ ತಂದೆ ರಾಜಕೀಯ ವಿಚಾರ ಚರ್ಚೆ ಮಾತಾಡ್ತಿದ್ರು. ತಮ್ಮ ಜೊತೆ ಬಂದ ಬೆಂಬಲಿಗರಿಗೆ ಧನ್ಯವಾದಗಳನ್ನು ತಿಳಿಸಿದರು.
2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲಲೇ ಬೇಕು ಎಂದು ಪಣ ತೊಟ್ಟಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರನ್ನು ಪಕ್ಷದತ್ತ ಸೆಳೆಯುವ ಕಾರ್ಯ ಮುಂದುವರೆದಿದೆ. ಇದೀಗ ಜಗದೀಶ್ ಶೆಟ್ಟರ್ ಮೂಲಕ ಬಿಎಸ್ ವೈ ಸಂಬಂಧಿ ಚಿಕ್ಕನಗೌಡರ ಅವರಿಗೆ ಗಾಳ ಹಾಕಿ ಪಕ್ಷಕ್ಕೆ ಕರೆದುಕೊಳ್ಳಲು ಯಶಸ್ವಿಯಾಗಿದೆ.
ಕಾಂಗ್ರೆಸ್’ನವರು ಮೋಸ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ: Govind Karajola
ಜಮೀನು ವಿಚಾರಕ್ಕೆ ಬಂದೂಕಿನಿಂದ ಶೂಟ್ ಮಾಡಿದ ದುಷ್ಕರ್ಮಿಗಳು, ತಂದೆ ಮಡಿಲಲ್ಲೇ ಪ್ರಾಣಬಿಟ್ಟ ಮಗ