Hubli News: ಹುಬ್ಬಳ್ಳಿ : ಇಂದು ನವಲಗುಂದ ತಾಲೂಕಿನ ನಾಯಕನೂರು, ತಡಹಾಳ ಹಾಗೂ ಗುಡಿ ಸಾಗರ ಗ್ರಾಮಗಳಿಗೆ ಸಂವಿಧಾನ ಜಾಗೃತಿ ಜಾಥಾ ಪ್ರವೇಶಿಸಿದಾಗ ಜಗ್ಗಲಿಗೆ ಮೇಳದೊಂದಿಗೆ ಮೆರವಣಿಗೆ ಮಾಡಲಾಯಿತು.
ಜಗ್ಗಲಿಗೆ ಮೇಳ, ಡೊಳ್ಳುಮೇಳ, ಕುಂಭಮೇಳ, ಚಕ್ಕಡಿ ರ್ಯಾಲಿಗಳೊಂದಿಗೆ ವಿಜೃಂಭಣೆಯಿಂದ ಜಾಥಾವನ್ನು ಸ್ವಾಗತಿಸಲಾಯಿತು.
ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ರಂಗೋಲಿ ಸ್ಪರ್ಧೆ ಗಮನ ಸೆಳೆಯಿತು. ಕಿರು ನಾಟಕ, ನೃತ್ಯ ಹಾಗೂ ಹಾಡುಗಳನ್ನು ಹಾಡಿ ರಂಜಿಸಿದರು. ಪ್ರಬಂಧ, ಚರ್ಚಾ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಟ್ರ್ಯಾಕ್ಟರ್ ರ್ಯಾಲಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್, ಬಸವಣ್ಣನವರು, ಮಹರ್ಷಿ ವಾಲ್ಮೀಕಿ ಸೇರಿದಂತೆ ವಿವಿಧ ಮಹಾನ ಪುರುಷರ ಭಾವಚಿತ್ರಗಳ ಮೆರವಣಿಗೆ ಗ್ರಾಮಗಳ ಪ್ರಮುಖ ಬೀದಿಗಳಲ್ಲಿ ನಡೆಯಿತು. ವಿದ್ಯಾರ್ಥಿಗಳು ವೇಷಭೂಷಣ ಧರಿಸಿದ್ದರು. ಈ ಸಂದರ್ಭಗಳಲ್ಲಿ ಸಂವಿಧಾನದ ಪ್ರತಿಜ್ಞಾ ವಿಧಿ ಬೋಧಿಸಿ ಸಾರ್ವಜನಿಕರಲ್ಲಿ ಸಂವಿಧಾನದ ಕುರಿತು ಅರಿವು ಮೂಡಿಸಲಾಯಿತು.
ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಂಗ ಅಧಿಕಾರಿ ಮಲ್ಲಿಕಾರ್ಜುನ ಗುಮ್ಮಗೋಳ ಸಂವಿಧಾನ ಹಾಗೂ ಅಂಬೇಡ್ಕರ್ ಅವರ ಕುರಿತು ಉಪನ್ಯಾಸ ನೀಡಿದರು.
ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿಯರಾದ ಕಫೀಲಾ ಏಲೂವಗಿ, ಮುಖಂಡರಾದ ವಿನೋದ ಅಸೂಟಿ, ವಿವಿಧ ಗ್ರಾಮ ಪಂಚಾಯತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಮುಖಂಡರು ಹಾಗೂ ಆಶಾ ಕಾರ್ಯಕರ್ತೆಯರು , ಗ್ರಾಮಸ್ಥರು ಪಾಲ್ಗೊಂಡಿದ್ದರು.
ಸುಪ್ರೀಂಕೋರ್ಟ್ ಸೂಚಿಸಿದ ಸ್ಥಳದಲ್ಲಿ ರಾಮ ಮಂದಿರ ಕಟ್ಟಿಲ್ಲ: ವಿವಾದದ ಬೆನ್ನಲ್ಲೇ ಸಂತೋಷ್ ಲಾಡ್ ಸ್ಪಷ್ಟನೆ
‘ಸಂತೋಷ್ ಲಾಡ್ ರಾಹುಲ್ ಗಾಂಧಿ ತರಹ ಮಾತನಾಡುತ್ತಿದ್ದಾರೆ. ಅವರು ಸ್ವಲ್ಪ ಮೆಚ್ಯೂರ್ ಆಗಿ ಮಾತಾಡಲಿ’




