ಜಲಧಾರೆ ಕುಮಾರಸ್ವಾಮಿಯವರ ಕಲ್ಪನೆಯ ಕೂಸು – ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ

ಬೆಂಗಳೂರು: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅನೇಕ ಯೋಜನೆ ಮಾಡಿದ್ದಾರೆ. ಬಡವರಿಗೆ ಅನ್ಯಾಯ ಆಗಬಾರದು ಅಂತ ಅನೇಕ ಕಾರ್ಯಕ್ರಮ ಸಿದ್ಧಪಡಿಸಿಕೊಂಡಿದ್ದಾರೆ. ನಿನ್ನೆ ಜಲಧಾರೆ ಕಾರ್ಯಕ್ರಮ ಪ್ರಾರಂಭ ಮಾಡಿದ್ದಾರೆ. ಜಲಧಾರೆ ಕುಮಾರಸ್ವಾಮಿ ಅವರ ಕಲ್ಪನೆಯ ಕೂಸು. ಇದೊಂದು ಶ್ರೇಷ್ಠ ಕಾರ್ಯಕ್ರಮವಾಗಿದೆ ಎಂಬುದಾಗಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹೇಳಿದ್ದಾರೆ.

ಇಂದು ರಾಜ್ಯಾಧ್ಯಕ್ಷರಾಗಿ ಸಿಎಂ ಇಬ್ರಾಹಿಂ ಪದಗ್ರಹಣ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಮಾತನಾಡಿ, ನಾನು ದೇವರನ್ನ ನಂಬುತ್ತೇನೆ. ಅದಕ್ಕೆ ‌ಇವತ್ತು ಅಧ್ಯಕ್ಷ ಸ್ಥಾನ ನೀಡಿದ್ದೇವೆ. ಹೆಚ್.ಕೆ. ಕುಮಾರಸ್ವಾಮಿ ಸಂಸದೀಯ ಮಂಡಳಿ ಅಧ್ಯಕ್ಷರಾಗಿ ಅಂತಾ ಹೇಳಿದ ಕೂಡಲೇ ಒಪ್ಪಿಕೊಂಡರು. ಒಬ್ಬ ಸಮರ್ಥ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಹಿರಿಯ ವ್ಯಕ್ತಿಗೆ ಅಧ್ಯಕ್ಷ ಸ್ಥಾನ ನೀಡಿದ್ದೇವೆ ಎಂದರು.

ಜಲಧಾರೆ ಕುಮಾರಸ್ವಾಮಿ ಅವರ ಕಲ್ಪನೆಯ ಕೂಸು. ಇದೊಂದು ಶ್ರೇಷ್ಠ ಕಾರ್ಯಕ್ರಮವಾಗಿದೆ. ಇಬ್ರಾಹಿಂ ಈ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸ ಮಾಡುತ್ತಾರೆ. ದೇವೇಗೌಡರ ಕುಟುಂಬದವೇ ಎಲ್ಲಾ ಇದ್ದಾರೆ ಅಂತ ಅಪಪ್ರಚಾರ ಮಾಡಬಹುದು. ಸಿಎಂ ಇಬ್ರಾಹಿಂ ಅವ್ರನ್ನ ಯಾಕೆ ಅಧ್ಯಕ್ಷರಾಗಿ ಮಾಡಿದ್ದೇವೆ. ಇದು ಒಕ್ಕಲಿಗರ ಪಾರ್ಟಿ ಅಂತ ಹೇಳಿದ್ರು. ಸುಳ್ಳು ಹೇಳಿ ಅಪಪ್ರಚಾರ ಮಾಡಿದ್ರು. ನಾನು ಮಂತ್ರಿ ಮಂಡಲ ಮಾಡಿದಾಗ ಒಕ್ಕಲಿಗರು ಇದ್ದದ್ದು 4 ಜನ ಮಾತ್ರ. ಓಬಿಸಿ, ಎಸ್‌ಸಿ, ಎಸ್‌ಟಿ ಗೆ ಹೆಚ್ಚು ಸ್ಥಾನ ಕೊಟ್ಟಿದ್ದೆ. ಎಲ್ಲಾ ವರ್ಗಗಳನ್ನ ಗುರುತಿಸಿ ‌ಮಂತ್ರಿಮಂಡಲ ಮಾಡಿದ್ದೆ. ಮುಸ್ಲಿಂಮರಿಗೆ ಮೀಸಲಾತಿ ತಂದಿದ್ದೆ ನಾನು ಎಂದು ಹೇಳಿದರು.

About The Author