Political News:
ಸಿದ್ದರಾಮಯ್ಯ ಆಪ್ತ, ಶಾಸಕ ಜಮೀರ್ ಅಹ್ಮದ್ ಪ್ರತಿನಿಧಿಸುವ ಚಾಮರಾಜಪೇಟೆ ಕ್ಷೇತ್ರದಲ್ಲಿ ಸಿದ್ದರಾಮಯ್ಯ ರೌಂಡ್ಸ್ ಹಾಕಿದ್ದಾರೆ. ಬಳಿಕ ಮಾತನಾಡಿದ ಅವರು ಭಾರತಿಯ ಜನತಾ ಪಕ್ಷ ಒಂದು ಕೊಮುವಾದಿ ಪಕ್ಷ. ಬಿಜೆಪಿ ತೊರೆದು ಹಲವರು ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದಾರೆ. ಬಿಜೆಪಿಯವರು ಮಹಿಳೆಯರ, ಬಡವರು, ದಲಿತರ ಏಳಿಗೆ ಬಯಸಲ್ಲ. ಮಾತಿಗೆ ಮಾತ್ರ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಅಂತಾರೆ. ಬಿಜೆಪಿಯವರು ದಲಿತರು, ಅಲ್ಪಸಂಖ್ಯಾತರನ್ನು ವಿರೋಧಿಸುತ್ತಾರೆ ಎಂದು ವಾಗ್ದಾಳಿ ಮಾಡಿದರು. ಈ ಬಾರಿ ನೂರಕ್ಕೆ ನೂರರಷ್ಟು ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಶಾಸಕ ಜಮೀರ್ ಅಹ್ಮದ್ಗೆ ರಾಜಕೀಯದಲ್ಲಿ ಉತ್ತಮ ಭವಿಷ್ಯವಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.
ಹುಬ್ಬಳ್ಳಿ ಕ್ಯಾನ್ಸರ್ ಥೆರಪಿ ಮತ್ತು ಸಂಶೋಧನಾ ಸಂಸ್ಥೆಗೆ ಸಿ.ಎಸ್.ಆರ್ ಮೂಲಕ 5 ಕೋಟಿ ರೂ: ಸಿಎಂ.ಬೊಮ್ಮಾಯಿ




