Saturday, November 15, 2025

Latest Posts

Jammu Kashmir Election: ಹಿರಿಯ ಮಹಿಳೆಯರಿಗೆ ವರ್ಷಕ್ಕೆ 18 ಸಾವಿರ ರೂ.: ಇದು ಬಿಜೆಪಿ ಗ್ಯಾರಂಟಿ

- Advertisement -

Jammu Kashmir News: ಜಮ್ಮು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದೆ.

ಕೇಂದ್ರ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಇಂದು ಸಮಾವೇಶ ನಡೆದಿದ್ದು, ಈ ವೇಳೆ ಬಿಜೆಪಿ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಈ ವೇಳೆ ಮಾ ಸಮ್ಮಾನ್ ಯೋಜನೆಯಡಿಯಲ್ಲಿ ಹಿರಿಯ ಮಹಿಳೆಯರಿಗೆ ವರ್ಷಕ್ಕೆ 18 ಸಾವಿರ ರೂಪಾಯಿ ನೀಡುವುದಾಗಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಹೇಳಿದೆ.

ಈ ವೇಳೆ ಮಾತನಾಡಿರುವ ಅಮಿತ್ ಶಾ, ನಾವು ಉಜ್ವಲ ಯೋಜನೆಯಡಿ ಉಚಿತವಾಗಿ ಗ್ಯಾಸ್ ಸಿಲೆಂಡರ್ ನೀಡುತ್ತಿದ್ದೇವೆ. ಪ್ರಗತಿ ಶಿಕ್ಷಾ ಯೋಜನೆಯಡಿ ವಿದ್ಯಾರ್ಥಿಗಳಿಗೆ ಪ್ರಯಾಣ ಭತ್ಯೆಯಾಗಿ ವಿದ್ಯಾರ್ಥಿಗಳಿಗೆ 3 ಸಾವಿರ ರೂಪಾಯಿ ನೀಡುತ್ತಿದ್ದೇವೆ. ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನಾ ಚಟುವಟಿಕೆ ಸಂಪೂರ್ಣವಾಗಿ ನಿಲ್ಲಿಸಲಾಗಿದೆ. ಅಲ್ಲದೇ, ಈ ಪ್ರದೇಶದಲ್ಲಿ ಭಯೋತ್ಪಾದನೆ ಹುಟ್ಟುಹಾಕುವಲ್ಲಿ ಭಾಗಿಯಾದವರ ಹೊಣೆಗಾರಿಕೆ ಸರಿಪಡಿಸಲು ಶ್ವೇತಪತ್ರ ತರುವುದಾಗಿ ಅಮಿತ್ ಶಾ ಭರವಸೆ ನೀಡಿದ್ದಾರೆ.

ಬಿಜೆಪಿ ಪ್ರಣಾಳಿಕೆಯಲ್ಲಿ ಹಿರಿಯ ಮಹಿಳೆಯರಿಗೆ 18 ಸಾವಿರ ರೂಪಾಯಿ ನೀಡುವುದಲ್ಲದೇ, ದೂರದ ಪ್ರದೇಶದಲ್ಲಿರುವ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ, ರೈತರ ಅಭಿವೃದ್ಧಿಗೆ ಹಲವು ಯೋಜನೆ ತರುವುದು ಸೇರಿ ಇನ್ನು ಹಲವು ವಿಷಯಗಳ ಬಗ್ಗೆ ಪ್ರಣಾಳಿಕೆಯಲ್ಲಿ ವಿವರಿಸಲಾಗಿದೆ.

- Advertisement -

Latest Posts

Don't Miss