ಕಡಿಮೆ ಅಂಕ ನೀಡಿದ್ದಕ್ಕೆ ಶಿಕ್ಷಕರಿಗೆ ಥಳಿಸಿದ ವಿದ್ಯಾರ್ಥಿಗಳು..!

Jarkhand News:

ಜಾರ್ಖಂಡ್‌ನ ದುಮ್ಕಾ ಜಿಲ್ಲೆಯ ವಸತಿ ಶಾಲೆಯಲ್ಲಿ ಪರೀಕ್ಷೆಯಲ್ಲಿ ಕಡಿಮೆ ಅಂಕ ನೀಡಿದ್ದಕ್ಕೆ ಶಾಲೆಯ ಗಣಿತ ಶಿಕ್ಷಕ ಮತ್ತು ಗುಮಾಸ್ತರನ್ನೇ ಮರಕ್ಕೆ ಕಟ್ಟಿಹಾಕಿ ವಿದ್ಯಾರ್ಥಿಗಳು ಥಳಿಸಿರುವ ಘಟನೆ ನಡೆದಿದೆ.

ಮಕ್ಕಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ನಿಜವಾಗಿಯೂ ಅರ್ಹತೆ ಹೊಂದಿದ್ದಾರೆಯೇ ಅಥವಾ ಶಿಕ್ಷಕರು ಉದ್ದೇಶಪೂರ್ವಕವಾಗಿ ಅವರಿಗೆ ಕಡಿಮೆ ಗ್ರೇಡ್ ಗಳನ್ನು ನೀಡಿದ್ದಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಬೇಕಿದೆ ಎನ್ನಲಾಗುತ್ತಿದೆ.

ಇನ್ನು ನಾವು ಘಟನೆಯ ಬಗ್ಗೆ ಮಾಹಿತಿ ಪಡೆದಿದ್ದೇವೆ. ಎಲ್ಲಾ ಶಿಕ್ಷಕರೊಂದಿಗೆ ಮಾತುಕತೆ ನಡೆಸಿದ್ದೇವೆ. ನಾವು ಅಲ್ಲಿಗೆ ತಲುಪಿದಾಗ, ವಿದ್ಯಾರ್ಥಿಗಳು ಪ್ರಾಕ್ಟಿಕಲ್ಸ್ ನಲ್ಲಿ ತಮಗೆ ಬಹಳ ಕಡಿಮೆ ಅಂಕಗಳನ್ನು ನೀಡಲಾಗಿದೆ ಮತ್ತು ತಮ್ಮ ಶಿಕ್ಷಕರಿಂದ ಸೂಕ್ತ ಪ್ರತಿಕ್ರಿಯೆಯನ್ನು ಪಡೆದಿಲ್ಲ ಎಂದು ಹೇಳಿರುವುದಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ರೈಲ್ವೇ ಸಿಬ್ಬಂದಿ ಎದುರೇ ಹಳಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ..!

ಪತ್ನಿ,ಅತ್ತೆ ಜೊತೆ ಅಪ್ರಾಪ್ತ ಮಗಳಿಗೂ ಚಾಕುವಿನಿಂದ ಇರಿದ ಪಾಪಿ…!

ಟ್ರಾವೆಲ್ ಬ್ಯಾಗ್‌ನಲ್ಲಿ 15 ವರ್ಷದ ಬಾಲಕಿಯ ಶವ…!

About The Author