ಡಿಸಿಸಿ ಬ್ಯಾಂಕ್ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಂಗಳವಾರ ಸ್ಪಷ್ಟನೆ ನೀಡಿದ್ದಾರೆ. ದೀಪಾವಳಿಯ ನಂತರ ಸೂಕ್ತ ಪ್ರತಿಕ್ರಿಯೆ ನೀಡಲಾಗುವುದು ಎಂದು ಹೇಳಿದ್ದಾರೆ. ಹುಕ್ಕೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ. ಡಿಸಿಸಿ ಚುನಾವಣೆ ಈಗ ಮುಗಿದಿದೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನದ ಆಯ್ಕೆಗೆ ಇನ್ನೂ ಸಮಯವಿದೆ. ಅಧ್ಯಕ್ಷ ಸ್ಥಾನಕ್ಕೆ ಈಗಷ್ಟೇ ಯಾರ ಹೆಸರೂ ಚರ್ಚೆಗೆ ಬಂದಿಲ್ಲ ಎಂದು ತಿಳಿಸಿದರು.
ಡಿಸಿಸಿ ಚುನಾವಣೆಯ ಹೊಸ್ತಿಲಲ್ಲಿ ವೈಯಕ್ತಿಕ ಟೀಕೆಗೆ ರಮೇಶ್ ಕತ್ತಿ ವಿರುದ್ಧ ಕಾನೂನಾತ್ಮಕ ಹೋರಾಟ ನಡೆಯಲಿದೆ. ಕತ್ತಿಯ ಹೇಳಿಕೆಗೆ ಸಮುದಾಯದ ಜನರೇ ಉತ್ತರ ನೀಡುತ್ತಾರೆ ಎಂದಿದ್ದಾರೆ. ತಮ್ಮ ಸಂಘಟನೆ ಹುಕ್ಕೇರಿಯಲ್ಲಿ ಎಂದಿನಂತೆ ಸಕ್ರಿಯವಾಗಿರುವುದಾಗಿ ಸ್ಪಷ್ಟಪಡಿಸಿದರು. ಮಾಧ್ಯಮದವರು ಚುನಾವಣಾ ಪ್ರಣಾಳಿಕೆಯಲ್ಲಿ RSS ನಿಷೇಧದ ಮಾತು ಪ್ರಸ್ತಾಪಿಸಿದ್ದಾರೋ ಎಂಬ ಪ್ರಶ್ನೆಗೆ ಉತ್ತರ ನೀಡಿದ ಅವರು, RSS ನಿಷೇಧದ ಬಗ್ಗೆ ಪ್ರಣಾಳಿಕೆಯಲ್ಲಿ ಉಲ್ಲೇಖವಾಗಿದ್ದರೂ ನಂತರ ಅದನ್ನು ಕೈಬಿಡಲಾಗಿದೆ. ಯಾವುದೇ ಸಂಘ ಸಂಸ್ಥೆಗಳು ಕಾರ್ಯಕ್ರಮ ನಡೆಸಬೇಕಾದರೆ ಸರ್ಕಾರದ ಅನುಮತಿ ಕಡ್ಡಾಯ. ಇದು ಎಲ್ಲರಿಗೂ ಅನ್ವಯಿಸುತ್ತದೆ ಎಂದು ತಿಳಿಸಿದ್ದಾರೆ.
ಬಿಹಾರ ಚುನಾವಣೆಗೆ ಹಣ ಸಂಗ್ರಹಿಸುತ್ತಿದ್ದಾರೆ ಎಂಬ ಬಿಜೆಪಿ ಮುಖಂಡರ ಆರೋಪವನ್ನು ಸತೀಶ್ ಜಾರಕಿಹೊಳಿ ತಳ್ಳಿಹಾಕಿದ್ದಾರೆ. ಇದು ಅವರ ಹಳೆಯ ಅಭ್ಯಾಸ. ಮುಖ್ಯಮಂತ್ರಿ ಅವರು ವರ್ಷಕ್ಕೆ ಎರಡು ಬಾರಿ ಉಚಿತವಾಗಿ ಊಟಕ್ಕೆ ಕರೆಯುತ್ತಾರೆ. ಈ ಹಿಂದೆ ಏನು ನಡೆದಿಲ್ಲ, ಈಗಲೂ ಏನೂ ಇಲ್ಲ ಎಂದು ತಿಳಿಸಿದರು. ಡಿಸಿಸಿ ಬ್ಯಾಂಕ್ ಚುನಾವಣೆಯು ಮುಕ್ತಾಯಗೊಂಡಿದೆ. ಈಗ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಪ್ರಕ್ರಿಯೆ ಮುಂದೆಯಲಿದೆ. ನಾಮನಿರ್ದೇಶನ ನಿರ್ದೇಶಕರ ಸ್ಥಾನವನ್ನು ಹಾಲು ಮತ ಸಮುದಾಯಕ್ಕೆ ನೀಡುವಂತೆ ಸಲಹೆ ನೀಡಿದ್ದೇವೆ ಎಂದು ತಿಳಿಸಿದ್ದಾರೆ.
ಸಾಮಾನ್ಯ ಕ್ಷೇತ್ರದಲ್ಲಿ ಜಾರಕಿಹೊಳಿ ಬ್ರದರ್ಸ್ ಸ್ಪರ್ಧೆಗೆ ರಮೇಶ್ ಕತ್ತಿ ವಿರೋಧ ವಿಚಾರವಾಗಿ ಮಾತನಾಡಿ, ಸಾಮಾನ್ಯ ಕ್ಷೇತ್ರದಲ್ಲಿ ಯಾರಿಗೆ ಶಕ್ತಿ ಇದೆ, ಪಕ್ಷ ಯಾರಿಗೆ ಟಿಕೆಟ್ ಕೊಡುತ್ತದೆಯೋ ಅವರು ಸ್ಪರ್ಧೆ ಮಾಡುತ್ತಾರೆ. ಜನರಲ್ ಇದ್ದಲ್ಲಿ ಇವರಿಗೆ ಕೊಡಬೇಕು ಎಂದು ಕಾನೂನಿನಲ್ಲಿ ಇಲ್ಲ. ನಮ್ಮದು ಹಕ್ಕು ಇದೆ, ವೋಟ್ ಬ್ಯಾಂಕ್ ಇದೆ, ನಮಗೂ ಶಕ್ತಿ ಇದೆ. ನಾವು ಕೇಳಲು ಅರ್ಹರಿದ್ದೇವೆ ಎಂದು ತಿರುಗೇಟು ನೀಡಿದರು.
ವರದಿ : ಲಾವಣ್ಯ ಅನಿಗೋಳ

