ಸರ್ಕಾರಗಳು, ಸಿಎಂ ಬದಲಾಗಬಹುದು, ನಮ್ಮ ಗುರಿ ಮಾತ್ರ ಬದಲಾಗದು ಎಂದು ಜಯಮೃತ್ಯುಂಜಯ ಸ್ವಾಮೀಜಿ

Dharwad News: ಧಾರವಾಡ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಸಂಬಂಧ ಹೋರಾಟ ಮಾಡುತ್ತಲೇ ಬಂದಿರುವ ಕೂಡಲ ಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರು ಇದೀಗ ಮತ್ತೊಂದು ಸುತ್ತಿನ ಹೋರಾಟಕ್ಕೆ ಅಣಿಯಾಗಿದ್ದಾರೆ.

ಧಾರವಾಡದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗಲೂ ನಾವು ಮೀಸಲಾತಿ ಸಲುವಾಗಿ ಹೋರಾಟ ಮಾಡಿದ್ದೇವೆ. ಈಗ ಕಾಂಗ್ರೆಸ್ ಸರ್ಕಾರ ಬಂದಾಗಲೂ 12 ಜಿಲ್ಲೆಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಹೋರಾಟ ಮಾಡಿದ್ದೇವೆ. ಇಷ್ಟಲಿಂಗ ಪೂಜೆ ಮಾಡುವುದರ ಮೂಲಕ ಹೋರಾಟ ಮಾಡಿದ್ದೇವೆ. ಇದೊಂದು ವಿಭಿನ್ನ ಹೋರಾಟವಾಗಿತ್ತು ಎಂದರು.

ಮಾರ್ಚ್ 12 ರಂದು ಕಲಬುರ್ಗಿಯಲ್ಲಿ ಹೋರಾಟ ಮಾಡಿದ್ದೆವು. ನೀತಿ ಸಂಹಿತೆ ಜಾರಿಯಾಗಿದ್ದರಿಂದ ಹೋರಾಟವನ್ನು ಸ್ಥಗಿತಗೊಳಿಸಲಾಯಿತು. ಈಗ ಮತ್ತೆ 18 ಜಿಲ್ಲೆಗಳಲ್ಲಿ ಮೀಸಲಾತಿ ಸಂಬಂಧ ಹೋರಾಟ ಮಾಡಲು ಮುಂದಾಗಿದ್ದೇವೆ. ಉಳವಿಯಲ್ಲಿ ಮೇ.23 ರಂದು ಸಂಕಲ್ಪ ಸಭೆ ಮಾಡಿ ಹೋರಾಟದ ರೂಪುರೇಷೆ ಸಿದ್ಧಪಡಿಸಲಿದ್ದೇವೆ. ಮೇ.23 ರಂದು ಮಧ್ಯಾಹ್ನ 3 ಗಂಟೆಗೆ ಉಳವಿಯಲ್ಲಿ ಸಭೆ ನಡೆಯಲಿದೆ. ಮಾರನೇ ದಿನ ಬೆಳಿಗ್ಗೆ ಸಾಮೂಹಿಕ ಇಷ್ಟಲಿಂಗ ಪೂಜೆ ಕೂಡ ಹಮ್ಮಿಕೊಳ್ಳಲಾಗಿದೆ. ಎರಡು ದಿನಗಳ ಕಾಲ ನಡೆಯುವ ಈ ಸಭೆಯಲ್ಲಿ ಎಲ್ಲರೂ ಪಾಲ್ಗೊಂಡು ಸಲಹೆ, ಸೂಚನೆ ನೀಡಬೇಕು. ಈ ನೀತಿ ಸಂಹಿತೆ ಮುಗಿದ ತಕ್ಷಣ ಮತ್ತೊಂದು ಸುತ್ತಿನ ಸಭೆಯನ್ನು ಜೂನ್ ತಿಂಗಳಲ್ಲಿ ಮಲೆಮಹದೇಶ್ವರ ಬೆಟ್ಟದಲ್ಲಿ ಹಮ್ಮಿಕೊಳ್ಳಲಾಗುವುದು. ಈ ಸಭೆಯಲ್ಲಿ ಸಮಾಜದ ಶಾಸಕರು, ಸಂಸದರು ಭಾಗವಹಿಸಲಿದ್ದಾರೆ ಎಂದರು.

ನಮ್ಮ ಸಮಾಜದ ಎಲ್ಲ ಜನಪ್ರತಿನಿಧಿಗಳು ಮೀಸಲಾತಿ ಸಂಬಂಧ ಮಾತನಾಡಬೇಕು. ಜೂನ್ ತಿಂಗಳಲ್ಲಿ ಮಳೆಗಾಲದ ಅಧಿವೇಶನ ನಡೆಯಬಹುದು. ಆಗ ನಮ್ಮ ಸಮಾಜದ ಶಾಸಕರು ಮೀಸಲಾತಿ ಸಂಬಂಧ ಮಾತನಾಡಬೇಕು. ಈಗಾಗಲೇ ಶಾಸಕರಾದ ಯತ್ನಾಳ ಹಾಗೂ ಬೆಲ್ಲದ ಧ್ವನಿ ಎತ್ತಿದ್ದಾರೆ. ಅದೇ ರೀತಿ ಉಳಿದ ಶಾಸಕರೂ ಮಾತನಾಡಬೇಕು. ಸರ್ಕಾರ, ಸಿಎಂಗಳು ಬದಲಾಗಬಹುದು ಆದರೆ, ನಮ್ಮ ಗುರಿ ಬದಲಾಗುವುದಿಲ್ಲ. ಇದುವರೆಗೂ ನಾವು ಶಾಂತ ರೀತಿಯ ಹೋರಾಟ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಯಾವ ರೀತಿ ಹೋರಾಟ ಮಾಡಬೇಕು ಎಂಬುದನ್ನು ಸಭೆಯಲ್ಲಿ ನಿರ್ಧರಿಸುತ್ತೇವೆ ಎಂದರು.

ಮಮತಾ ಬ್ಯಾನರ್ಜಿ ಬಗ್ಗೆ ವಿವಾದಾತ್ಮಕ ಹೇಳಿಕೆ: ಬಿಜೆಪಿ ಅಭ್ಯರ್ಥಿಗೆ 1 ದಿನದ ಪ್ರಚಾರ ನಿಷೇಧ

Baby Death: ಮನೆಯಲ್ಲಿ ಒಬ್ಬಂಟಿಯಾಗಿ ಮಗುವನ್ನು ಬಿಟ್ಟು ಹೋದ ಪೋಷಕರು: ಮಗು ಸಾವು

National News: ಎಮಿರೇಟ್ಸ್ ವಿಮಾನ ಡಿಕ್ಕಿ: 35ಕ್ಕೂ ಹೆಚ್ಚು ರಾಜಹಂಸ ಪಕ್ಷಿಗಳ ಸಾವು..?

About The Author