- Advertisement -
ಮೈಸೂರು : ಮೈಸೂರು ಮಹಾನಗರ ಪಾಲಿಕೆ ಮೇಯರ್ ಮತ್ತು ಉಪಮೇಯರ್ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ತೆಕ್ಕೆಗೆ ಸ್ಥಾನಗಳು ಒಲಿದಿವೆ.
ಜೆಡಿಎಸ್ ಪಕ್ಷದ ಅಭ್ಯರ್ಥಿ ರುಕ್ಮೀಣಿ ಮಾದೇಗೌಡ ೨೩ನೇ ಮೇಯರ್ ಆಗಿ ಆಯ್ಕೆಯಾಗಿದ್ದು, ಕಾಂಗ್ರೆಸ್‌ನಿಂದ 23ನೇ ಉಪಮೇಯರ್ ಆಗಿ ಅನ್ವರ್ ಬೇಗ್ ಆಯ್ಕೆಯಾಗಿದ್ದಾರೆ.
ಮೇಯರ್ ಸ್ಪರ್ಧೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ರುಕ್ಮೀಣಿ ಮಾದೇ ಗೌಡ 43 ಮತಗಳನ್ನು ಪಡೆದರೆ, ಬಿಜೆಪಿ ಪಕ್ಷದ ಅಭ್ಯರ್ಥಿ ಸುನಂದ 26 ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶಾಂತ ಕುಮಾರಿ ಶೂನ್ಯ ಮತಗಳನ್ನು ಪಡೆದಿದ್ದಾರೆ.
- Advertisement -