ಬೆಂಗಳೂರು: ಕೊನೆಗೂ ಜಾತ್ಯಾತೀತ ಜನತಾ ದಳದಿಂದ ಎರಡು ಶಿಕ್ಷಕರ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಯಾಗಿ ಶ್ರೀಶೈಲ ನಿಂಗಪ್ಪ ಗಡದಿನ್ನಿ ಹೆಸರು ಘೋಷಣೆ ಮಾಡಲಾಗಿದೆ. ವಾಯುವ್ಯ ಶಿಕ್ಷಕರ ಕ್ಷೇತ್ರಕ್ಕೆ ಚಂದ್ರಶೇಖರ ಲೋಣಿಗೆ ಟಿಕೆಟ್ ಹಂಚಿಕೆ ಮಾಡಲಾಗಿದೆ.
ಇಂದು ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ನಾಳೆ ಶಿಕ್ಷಕರ, ಪದವೀಧರ ಕ್ಷೇತ್ರಗಳ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಎರಡ್ಮೂರು ಅಭ್ಯರ್ಥಿಗಳನ್ನ ಅಂತಿಮಗೊಳಿಸಲಾಗಿದೆ ಎಂದರು.
ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಯಾಗಿ ಶ್ರೀಶೈಲ ನಿಂಗಪ್ಪ ಗಡದಿನ್ನಿ ಹೆಸರು ಘೋಷಣೆ ಮಾಡಲಾಗಿದೆ. ವಾಯುವ್ಯ ಶಿಕ್ಷಕರ ಕ್ಷೇತ್ರಕ್ಕೆ ಚಂದ್ರಶೇಖರ ಲೋಣಿಗೆ ಟಿಕೆಟ್ ಹಂಚಿಕೆ ಮಾಡಲಾಗಿದೆ ಎಂಬುದಾಗಿ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದರು. ಈ ಮೂಲಕ ಜೆಡಿಎಸ್ ಪಕ್ಷ ಬಿಟ್ಟು, ಬಿಜೆಪಿಗೆ ಸೇರ್ಪಡೆಗೊಂಡಂತ ಬಸವರಾಜ ಹೊರಟ್ಟಿ ವಿರುದ್ಧ ಶ್ರೀಶೈಲ ನಿಂಗಪ್ಪ ಗಡದಿನ್ನಿಯನ್ನು ಕಣಕ್ಕೆ ಇಳಿಸಲಾಗಿದೆ.



