Wednesday, May 29, 2024

Latest Posts

ಮಂಡ್ಯ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಘೋಷಣೆ: ಸಕ್ಕರೆ ನಾಡಿಂದ ಕುಮಾರಸ್ವಾಮಿ ಸ್ಪರ್ಧೆ

- Advertisement -

Political News: ಎಲೆಕ್ಷನ್ ಅಂದಾಕ್ಷಣ ಕುತೂಹಲ ಹುಟ್ಟಿಸುವ ಕ್ಷೇತ್ರ ಅಂದ್ರೆ ಮಂಡ್ಯ. ಮಂಡ್ಯ ಕ್ಷೇತ್ರಕ್ಕೆ ಯಾವ ಪಕ್ಷಕ್ಕೆ ಯಾವ ಅಭ್ಯರ್ಥಿ ನಿಲ್ಲುತ್ತಾರೆಂದು ಹಲವರಲ್ಲಿ ಕುತೂಹಲ ಮನೆ ಮಾಡಿರುತ್ತದೆ. ಅದರಲ್ಲೂ ಈ ಬಾರಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾಗಿದ್ದು, ಮಂಡ್ಯ ಕ್ಷೇತ್ರ ಸುಮಲತಾ ಮತ್ತು ಕುಮಾರಸ್ವಾಮಿ ಇಬ್ಬರೂ ಕೂಡ ಚುನಾವಣೆ ನಿಲ್ಲಲು ಸಜ್ಜಾಗಿದ್ದಾರೆ.

ಆದರೆ ಮಂಡ್ಯ ಜೆಡಿಎಸ್ ಪಾಲಾಗಿದ್ದು, ಸುಮಲತಾ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಬಹುದು ಎಂದು ಎಲ್ಲರೂ ಅಂದಾಜಿಸಿದ್ದರು. ಆದರೆ ಕುಮಾರಸ್ವಾಮಿ ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದರೆ ಮಾತ್ರ, ತಾನು ಸಪೋರ್ಟ್ ಮಾಡುವುದಾಗಿ ಸುಮಲತಾ ಹೇಳಿದ್ದಾರಂತೆ. ಹಾಗಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಈ ಬಾರಿ ಮಂಡ್ಯ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಅಭ್ಯರ್ಥಿಯಾಗಿ ತಾವೇ ಕಣಕ್ಕಿಳಿದಿದ್ದಾರೆ.

ಮೊದಲು ಮಂಡ್ಯಕ್ಕೆ ಅಭ್ಯರ್ಥಿಯಾಗಿ ನಿಖಿಲ್ ಕಣಕ್ಕಿಳಿಯುತ್ತಾರೆಂದು ಅಂದಾಜಿಸಲಾಗಿತ್ತು. ಆದರೆ ಎಲ್ಲರ ಬೆಂಬಲ ಕುಮಾರಸ್ವಾಮಿಗೆ ಇರುವುದರಿಂದ, ಜಿದ್ದಾಜಿದ್ದಿನ ಫೈಟ್ ಇರುವ ಕಾರಣ, ಕುಮಾರಸ್ವಾಮಿಯವರೇ ಮಂಡ್ಯ ಕ್ಷೇತ್ರಕ್ಕೆ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಈ ಬಗ್ಗೆ ಸಭೆ ನಡೆಸಿರುವ ಕುಮಾರಸ್ವಾಮಿ, ಎಲ್ಲರ ಒಪ್ಪಿಗೆಯಿಂದಲೇ, ಸ್ಪರ್ಧಿಸಲು ನಿರ್ಧರಿಸಿದ್ದಾರೆ.

ಕಸದ ಟ್ರಕ್ ಡಿಕ್ಕಿ ಲಂಡನ್‌ನಲ್ಲಿ ಭಾರತೀಯ ಪಿಎಚ್‌ಡಿ ವಿದ್ಯಾರ್ಥಿನಿ ಸಾವು

ಪರಪ್ಪನ ಅಗ್ರಹಾರದ ಪಾಲಾದ ಸೋನುಗೌಡ: ರೀಲ್ಸ್ ರಾಣಿಗೆ 14 ದಿನ ನ್ಯಾಯಾಂಗ ಬಂಧನ

ರೋಹಿತ್‌ ಶರ್ಮಾಗೇ ಆಡೋದನ್ನ ಹೇಳಿಕೊಟ್ಟ ಪಾಂಡ್ಯಾ: ಆಕ್ರೋಶ ಹೊರಹಾಕಿದ ನೆಟ್ಟಿಗರು

- Advertisement -

Latest Posts

Don't Miss