- Advertisement -
state story:
ಜೆಡಿಎಸ್ ವಿಜಯಪುರ ಜಿಲ್ಲೆಯಲ್ಲಿ ಪಂಚರತ್ನ ಯಾತ್ರೆ ಕೈಗೊಂಡ ಸಂದರ್ಭದಲ್ಲಿಯೇ ಪಕ್ಷಕ್ಕೆ ಆಘಾತ ಎದುರಾಗಿದೆ. ಜಿಲ್ಲೆಯ ಸಿಂದಗಿ ಮತಕ್ಷೇತ್ರದ ಜೆಡಿಎಸ್ ಘೋಷಿತ ಅಭ್ಯರ್ಥಿ ಶಿವಾನಂದ ಪಾಟೀಲ ಸೋಮಜಾಳ (54) ಅವರು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶುಕ್ರವಾರ ವಿಜಯಪುರ ನಗರದ ದರಬಾರ ಹೈಸ್ಕೂಲ್ ಮೈದಾನದಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಪಂಚರತ್ನ ಯಾತ್ರೆಯಲ್ಲಿ ಅವರು ಪಾಲ್ಗೊಂಡಿದ್ದರು. ಅಲ್ಲದೇ, ನಂತರ ನಾಗಠಾಣ ಮತಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿಯೂ ಶಿವಾನಂದ ಪಾಟೀಲ ಸೋಮಜಾಳ ಭಾಗಿಯಾಗಿದ್ದರು. ಶಿವಾನಂದ ಪಾಟೀಲ ಸೋಮಜಾಳ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಇನ್ನೂ ಮುದ್ದೇಬಿಹಾಳ ಮತಕ್ಷೇತ್ರದ ಪಂಚರತ್ನ ರಥಯಾತ್ರೆಯನ್ನೂ ಮುಂದೂಡಲಾಗಿದೆ.
- Advertisement -