ಚಾಮರಾಜಪೇಟೆಯಲ್ಲಿ ಜೆಡಿಎಸ್ ಗೆಲ್ಲುತ್ತದೆ : ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಚಾಮರಾಜಪೇಟೆ ಕ್ಷೇತ್ರದಲ್ಲಿ ಜೆಡಿಎಸ್ ಗೆದ್ದೇ ಗೆಲ್ಲುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಅಚಲ ವಿಶ್ವಾಸ ವ್ಯಕ್ತಪಡಿಸಿದರು. ಸೇರ್ಪಡೆ ಸಭೆಯಲ್ಲಿ ಮಾತನಾಡಿದ ಅವರು, ಕೆಲವರು ಹಣ ಹಂಚಿ ಗೆಲ್ಲಲು ಹೊರಟಿದ್ದಾರೆ. ಆದರೆ ಅವರು ಹಂಚುವ ಹಣ ಎಲ್ಲಿಂದ ಬರುತ್ತದೆ ಎನ್ನುವುದನ್ನು ಜನರು ಅರ್ಥ ಮಾಡಿಕೊಳ್ಳಬೇಕು ಎಂದು ತಮ್ಮ ವಿರೋಧಿಗಳಿಗೆ ಟಾಂಗ್ ನೀಡಿದರು. ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಚಾಮರಾಜಪೇಟೆಯೇ  ಜೆಡಿಎಸ್ ಗೆಲ್ಲುವ ಮೊದಲ ಕ್ಷೇತ್ರ ಆಗಲಿದೆ. ಗುಜರಾತ್ ಚುನಾವಣೆ ಫಲಿತಾಂಶ ಬಳಿಕ ಕಾಂಗ್ರೆಸ್ ‌ಮತ್ತು ಬಿಜೆಪಿ ಪಕ್ಷಗಳು ಯಾವೆಲ್ಲ ತಂತ್ರ ಮಾಡ್ತಾ ಇವೆ ಎನ್ನುವುದು ಗೊತ್ತಿದೆ. ಆದರೂ ಬಿಜೆಪಿ-ಕಾಂಗ್ರೆಸ್ ಪಕ್ಷಕ್ಕಿಂತ ಜೆಡಿಎಸ್ ಗ್ರಾಫ್ ಮೇಲೆ ಹೋಗುತ್ತಿದೆ.

ಜಸ್ಟ್ ಪಾಸ್’ ಆಗಲು ಹೊರಟ ನಟ ಶ್ರೀ ಗೆ ಸಿಕ್ಕಳು ಹೀರೋಯಿನ್ : ಡಿಸೆಂಬರ್ 14ಕ್ಕೆ ಸೆಟ್ಟೇರಲಿದೆ ಸಿನಿಮಾ

ಪಂಚರತ್ನ ಕಾರ್ಯಕ್ರಮದ ಮೂಲಕ ಅದು ಗೊತ್ತಾಗಿದೆ ಎಂದು ಅವರು ಹೇಳಿದರು. ಇಂದು ಬಿಜೆಪಿ, ಕಾಂಗ್ರೆಸ್ ಪಕ್ಷಗಳು ಆಂತರಿಕ ಸಮೀಕ್ಷೆ ನಡೆಸುತ್ತಿವೆ. ಪ್ರತಿ ಎರಡು ತಿಂಗಳಿಗೆ ಒಂದು ಕಾರ್ಯತಂತ್ರ  ಮಾಡುತ್ತಿವೆ. ಬಿಜೆಪಿಯ ಆಂತರಿಕ ಸರ್ವೆ ಪ್ರಕಾರ ಜೆಡಿಎಸ್ 55 ಸ್ಥಾನ ಗೆಲ್ಲಲಿದೆ ಎನ್ನುತ್ತಿದ್ದಾರೆ. ನಾವು ಗೆಲ್ಲೋದು ಬರಿ 55 ಅಲ್ಲ. 123 ಸ್ಥಾನ ಗೆಲ್ಲುತ್ತೇವೆ. ಅವರ ಪಾಪದ ಕೊಡ ತುಂಬುತ್ತಿದೆ. ಅವರನ್ನು ಎದುರಿಸೋಕೆ ನಿಮ್ಮ ಶಕ್ತಿ ಸಾಕು. ಯಾರಾದರೂ ನಮ್ಮ ಕಾರ್ಯಕರ್ತರನ್ನು ಪೊಲೀಸರನ್ನು  ಬಿಟ್ಟು ಹೆದರಿಸಿದರೆ ನನ್ನ ಗಮನಕ್ಕೆ ತನ್ನಿ. ಉಳಿದಿದ್ದನ್ನು ನಾನು ನೋಡ್ಕೊತೇನೆ ಎಂದು ವಿರೋಧಿಗಳಿಗೆ ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಿದರು.

ಕಾಂಗ್ರೆಸ್, ಬಿಜೆಪಿ ಪಕ್ಷಗಳಿಂದ ಜೆಡಿಎಸ್ ಪಕ್ಷಕ್ಕೆ ಭಾರೀ ಸೇರ್ಪಡೆ

ನಿರಂತರ ಮಳೆಯಿಂದಾಗಿ ಬೆಂಗಳೂರಿಗೆ ಇಂದು ಹಳದಿ ಅಲರ್ಟ್

About The Author